ಸರ್ಕಾರ ನೀರು ಬಿಡುವುದಿಲ್ಲವೆಂದು ಗಟ್ಟಿಯಾಗಿ ನಿಂತರೆ ನಾವು ಜೊತೆ ನಿಲ್ಲುತ್ತೇವೆ: ಬಸವರಾಜ ಬೊಮ್ಮಾಯಿ

Kaveri River water dispute: ಮುಂದಿನ ವಾರ ಸುಪ್ರೀಂಕೊರ್ಟ್‍ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ, ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.

Written by - Prashobh Devanahalli | Edited by - Puttaraj K Alur | Last Updated : Sep 12, 2023, 07:35 PM IST
  • ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ, ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ
  • ಮಂಡ್ಯ ಜಿಲ್ಲೆಯೊಂದಕ್ಕೆ 32 ಟಿಎಂಸಿ ನೀರು ಬೇಕು, ಇದುವರೆಗೂ ಕೇವಲ 7 ಟಿಎಂಸಿ ನೀರು ಬಿಡಲಾಗಿದೆ
  • ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲವೆಂದು ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು
ಸರ್ಕಾರ ನೀರು ಬಿಡುವುದಿಲ್ಲವೆಂದು ಗಟ್ಟಿಯಾಗಿ ನಿಂತರೆ ನಾವು ಜೊತೆ ನಿಲ್ಲುತ್ತೇವೆ: ಬಸವರಾಜ ಬೊಮ್ಮಾಯಿ title=
ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ ಟೀಕೆ

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲವೆಂದು ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

CWRC ಪ್ರತಿ ದಿನ 5000 ಕ್ಯೂಸೆಕ್ಸ್ ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಸ್ತುಸ್ಥಿತಿ ನೋಡಿದರೆ ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ. ಮಂಡ್ಯ ಜಿಲ್ಲೆಯೊಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಬಿಟ್ಟಿರುವುದು ಕೇವಲ 7 ಟಿಎಂಸಿ ಮಾತ್ರ‌. ಭತ್ತ, ಕಬ್ಬು ಮತ್ತು ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜೆ.ಪಿ.ನಡ್ಡಾ, ನಳಿನ್‌ ಕುಮಾರ್‌ ಕಟೀಲ್‌ಗೆ ನೋಟಿಸ್‌

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ‌. ನಾಳೆ CWMM ಸಭೆ ಇದೆ. ಅಲ್ಲಿ ರಾಜ್ಯ ಸರ್ಕಾರ ವಾಸ್ತವ ಹೇಳಬೇಕು. ಸಭೆಯಿಂದ ಹೊರಬರುತ್ತಾರೋ ಏನು ಮಾಡುತ್ತಾರೋ ಅವರಿಗೆ ಬಿಟ್ಟಿದ್ದು. ಮುಂದಿನ ವಾರ ಸುಪ್ರೀಂಕೊರ್ಟ್‍ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ, ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು’ ಎಂದು ಬೊಮ್ಮಾಯಿ ಸಲಹೆ ನೀಡಿದರು.

‘ನಾವು ಕಾವೇರಿ ನೀರಿನ ವಿಚಾರವಾಗಿ ರಾಜಕಾರಣ ಮಾಡುತ್ತಿಲ್ಲ. ಇವರು ಗಟ್ಟಿಯಾಗಿ ನಿಲ್ಲಬೇಕು. ಅಂದರೆ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ಇವರು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಹೇಳುತ್ತಾರೆ. ಅದನ್ನು ಬಿಟ್ಡು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮನವೊಲಿಕೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಪಕ್ಷ ಸಂಘಟನೆ.. ಲೋಕಸಭೆ ತಂತ್ರಗಾರಿಗೆ ಬಗ್ಗೆ ತಯಾರಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News