ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

ಡಿಕೆಶಿವಕುಮಾರ್  ಅವರ  ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Ranjitha R K | Last Updated : Jan 8, 2025, 01:50 PM IST
  • ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಡಿಕೆಶಿ ಸಹನೆ ಪ್ರದರ್ಶನ
  • ಸಹನೆ ಕಟ್ಟೆ ಯಾವಾಗ ಒಡೆಯುವ ಕಾಲ ಸನ್ನಿಹಿತ
  • ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ
ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ title=

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ  ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್  ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಅದರ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇದು ನಿರೀಕ್ಷಿತ ಬೆಳವಣಿಗೆ. ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್  ಅವರ ಸಹನೆ. ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್  ಅವರ  ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.

ಇದನ್ನೂ ಓದಿ : ಇಂದು ಚಿಕ್ಕಮಗಳೂರಿನಲ್ಲಿ 6 ಮಂದಿ ನಕ್ಸಲರು ಶರಣಾಗತಿ

ಈ ಸರ್ಕಾರ ಎಲ್ಲದರಲ್ಲಿ ಕಮೀಷನ್, ಭ್ರಷ್ಟಾಚಾರ ತುಂಬಿ ಹೋಗಿದೆ. ಇದರಿಂದ  ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಅನುಭವಿಸುತ್ತಿದ್ದಾರೆ. ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್ ವೆಲ್ ಗಳಿಗೂ ಕಮೀಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ  ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮೀಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ. ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು. 
ಇನ್ನು ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ ಎಂದರು. 

ಇದನ್ನೂ ಓದಿ : ಬೆಂ-ಹೈ ಹೆದ್ದಾರಿಯಲ್ಲಿ ದಟ್ಟವಾದ ಮಂಜು: ವಾಹನ ಸವಾರರ ಪರದಾಟ

ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್  ಗಮನ ಹರಿಸಿದೆ. ಈ ತಿಂಗಳಲ್ಲಿ ಎಲ್ಲವೂ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ನಿರ್ಮಾಣ ಮಾಡಲಿದೆ ಎಂದು ಹೇಳಿದ್ದಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News