ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ : ಬಸವರಾಜ ಬೊಮ್ಮಾಯಿ
ಹಿಂದುಳಿದವರಲ್ಲಿ ಅತಿ ಹಿಂದುಳಿದ ಕಟ್ಟ ಕಡೆಯ ಸಮುದಾಯಗಳಿಗೆ ಮೀಸಲಾತಿ ಪ್ರಯೋಜನ ಸಿಗುತ್ತಿಲ್ಲ. ಅವರಿಗೆ ಸೌಲಭ್ಯ ಸಿಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಚುನಾವಣೆ ಹತ್ತಿರ ಬಂದಾಗ ಜಾತ್ಯಾತೀತ ಎಂದು ಕರೆಯುವ ಕಾಂಗ್ರೆಸ್ ಪಕ್ಷಕ್ಕೆ ಜಾತಿಗಳ ಮೇಲೆ ಪ್ರೀತಿ ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮುಂತಾದ ಕೆಲಸ ಮಾಡುತ್ತಾರೆ. 2017ರಲ್ಲಿ ಸಿದ್ದರಾಮಯ್ಯ ಎಲ್ಲಾ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಮಾಡಲು ಸೂಚಿಸಿದ್ದರು. ಅವರ ಉದ್ದೇಶ ಬೇರೆಯೇ ಆಗಿತ್ತು. ಕಾಂತರಾಜ ವರದಿ ಸಿದ್ದವಾದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ ಮಾಡಲಿಲ್ಲ. ಆಗ ವರದಿಯ ಬಗ್ಗೆ ಸಾಕಷ್ಡು ಗೊಂದಲ ಇತ್ತು. ಈಗ ಕೊಟ್ಟಿರುವ ವರದಿಯಲ್ಲಿಯೂ ಗೊಂದಲ ಇದೆ. ಇವರು 5.82 ಕೋಟಿ ಜನರನ್ನು ಸಂಪರ್ಕ ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಬಹುತೇಕ ಜನರು ತಮ್ಮನ್ನು ಸಂಪರ್ಕ ಮಾಡಿಲ್ಲ ಎನ್ನುತ್ತಾರೆ. ಈಗ ಕೊಟ್ಟಿರುವ ವರದಿ ಚೌ ಚೌ ವರದಿ. ಡಾಟಾ ಕಾಂತರಾಜ ಅವರದ್ದು, ಜಯಪ್ರಕಾಶ್ ಹೆಗ್ಡೆ ಅವರು ವರದಿ ನನ್ನದು ಎಂದು ಹೇಳಿದ್ದಾರೆ. ಸಿಎಂ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಿಸಿ ರಾಜಕೀಯ ಕಾರಣಕ್ಕೆ ವರದಿ ಪಡೆದಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.
ಇದನ್ನೂ ಓದಿ : ಹಳೆ ಶಾಲೆಗೆ ಹೊಸ ಬಣ್ಣ ಬಳಿದ ಹಳೆಯ ವಿದ್ಯಾರ್ಥಿಗಳು
ಜಾತಿ ಸಮೀಕ್ಷೆಗೆ ವಿರೋಧವಿಲ್ಲ:
ಜಾತಿ ಸಮೀಕ್ಷೆಗೆ ನಮ್ಮ ವಿರೋಧವಿಲ್ಲ. ಜಾತಿ ಸಂಖ್ಯೆಯ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಮೇಲೆತ್ತಬೇಕು ಎನ್ನುವ ಬದ್ದತೆ ನಮಗಿದೆ. ಅದಕ್ಕಾಗಿಯೇ ನಾವು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಇವರು ತೆಗೆದುಕೊಂಡ ವರದಿಯ ಬಗ್ಗೆ ಸರ್ಕಾರ ಯಾಕೆ ಮುಚ್ಚು ಮರೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು. ಹಿಂದುಳಿದ ವರ್ಗದಲ್ಲಿ150 ಜಾತಿಗಳನ್ನು ಸೇರಿಸಿದ್ದಾರೆ. ಅವರಿಗೆ ಮೀಸಲಾತಿಯ ಬಗ್ಗೆ ಚರ್ಚೆಯಾಗಬೆಕು. ಹಿಂದುಳಿದವರಲ್ಲಿ ಅತಿ ಹಿಂದುಳಿದ ಕಟ್ಟ ಕಡೆಯ ಸಮುದಾಯಗಳಿಗೆ ಮೀಸಲಾತಿ ಪ್ರಯೋಜನ ಸಿಗುತ್ತಿಲ್ಲ. ಅವರಿಗೆ ಸೌಲಭ್ಯ ಸಿಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಸರ್ಕಾರದ ನಡವಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ. ಅವರ ಸಂಪುಟದ ಸಚಿವರೇ ಅಪಸ್ವರ ಎತ್ತಿದ್ದಾರೆ. ಜಾತಿ ಸಮೀಕ್ಷೆ ವಿಚಾರದಲ್ಲಿ ಸರ್ಕಾರ ಡಬಲ್ ಗೇಮ್ ಆಡುತ್ತಿದ್ದು, ಚಿವುಟುವವರೂ ಇವರೇ, ರಮಿಸುವವರೂ ಇವರೇ. ಬಡವರು, ತುಳಿತಕ್ಕೊಳಗಾದವರ ಜೊತೆ ಆಟ ಆಡುವುದು ಸರಿಯಲ್ಲ. ಸಮಾಜದಲ್ಲಿ ಗೊಂದಲ ಉಂಟು ಮಾಡುವ ಕೆಲಸ ಮಾಡಬೇಡಿ. ವರದಿ ಮಾಡಿದವರೊಬ್ಬರು ನೀಡುವವರೊಬ್ಬರು. ಸಿಎಂ ವರದಿ ಸ್ವೀಕಾರ ಮಾಡುತ್ತಾರೆ. ಅವರ ಸಚಿವರು ಅದನ್ನು ವಿರೋಧ ಮಾಡುತ್ತಾರೆ. ಇದು ಎಂಥ ಕ್ರಮ ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ತುಮಕೂರಿನ ಕುಣಿಗಲ್ ತಾ. ವ್ಯಾಪ್ತಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಮುಸ್ಲೀಮರು ಅಲ್ಪ ಸಂಖ್ಯಾತರಲ್ಲ :
ರಾಜ್ಯ ಸರ್ಕಾರ ಸ್ವೀಕಾರ ಮಾಡಿರುವ ವರದಿಯಲ್ಲಿ 70 ಲಕ್ಷ ಜನ ಮುಸ್ಲೀಮರಿದ್ದಾರೆ ಎಂದು ಸೋರಿಕೆಯಾದ ವರದಿಯಲ್ಲಿ ಮಾಹಿತಿ ಇದೆ. ಹಾಗಿದ್ದರೆ ಅವರು ಅಲ್ಪ ಸಂಖ್ಯಾತರು ಹೇಗಾಗುತ್ತಾರೆ? ರಾಜ್ಯದ ಬಹು ಸಂಖ್ಯಾತ ಜಾತಿಗಳಿಗಿಂತ ಅವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, ಹಾಗಿದ್ದ ಮೇಲೆ ಅವರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಎಫ್ ಎಸ್ ಎಲ್ ವರದಿ ಬಹಿರಂಗ ಪಡಿಸಲಿ :
ಪಾಕ್ ಪರ ಘೋಷಣೆ ಕೂಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಸ್ಪಷ್ಟವಾಗಿದೆ ಎಂಬ ಮಾಹಿತಿ ಇದೆ. ಘೊಷಣೆ ಕೂಗಿದವರು ಭಯೋತ್ಪಾದಕರಿಗೆ ಸಹಕಾರ ನೀಡುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಸರ್ಕಾರ ಯಾವ ಕಾರಣಕ್ಕೆ ವರದಿ ಮುಚ್ಚಿಡಲು ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.