ಬೆಂಗಳೂರು: ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಅಂತಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಭಾನುವಾರ ಮತ್ತೆ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ(Siddaramaiah) ವಿರುದ್ಧ ಎಚ್‌ಡಿಕೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ?’ ಅಂತಾ ಪ್ರಶ್ನಿಸಿದ್ದಾರೆ.


ಎಸಿಬಿ ಮಿಂಚಿನ ಕಾರ್ಯಾಚರಣೆ; ಬೆಳಗಾವಿಯಲ್ಲಿ ಮುಜರಾಯಿ ಇಲಾಖೆ ತಹಶೀಲ್ದಾರ್ ಬಂಧನ


‘ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ. ಪಾಪ ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ. ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ; ಇಂತಹ ನುಡಿಮುತ್ತುಗಳು ‘ಸ್ವಯಂ ಘೋಷಿತ ಸಂವಿಧಾನ ಪಂಡಿತ’ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ’ ಅಂತಾ ಟೀಕಿಸಿದ್ದಾರೆ.


ಚಾಮರಾಜನಗರ: 79 ಶಾಲಾ ವಿದ್ಯಾರ್ಥಿಗಳು ಸೇರಿ 419 ಮಂದಿಗೆ ಕೊರೊನಾ, ಓರ್ವ ಸೋಂಕಿತ ಸಾವು


Devaraj Urs) ಅವರ ನಂತರ ‘ಐದು ವರ್ಷದ ಮುಖ್ಯಮಂತ್ರಿ’ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ‘ಐದು ವರ್ಷದ ಮುಖ್ಯಮಂತ್ರಿ’ ಎಂಬ ಪ್ರಭಾವಳಿಯ ಕಥೆ ಏನು?’ ಅಂತಾ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.