ಬೆಂಗಳೂರು: ರಾಜ್ಯಸ್ಥಾನದ ಉಯಪುರದಲ್ಲಿ ನಡೆದಿರುವ ಐಸಿಸ್ ಮಾದರಿಯ ಹತ್ಯೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ?’ ಎಂದು ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

‘ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆ ನನಗೆ ತೀವ್ರ ಘಾಸಿ ಉಂಟು ಮಾಡಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ’ವೆಂದು ಕುಮಾರಸ್ವಾಮಿ ಹೇಳಿದ್ದಾರೆ.


ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ: ಎಚ್‌ಡಿಕೆ ಆಕ್ರೊಶ


‘ಕನ್ಹಯ್ಯ ಲಾಲ್ ಅವರನ್ನು ಹತ್ಯೆ ಮಾಡಿರುವುದನ್ನು ಪಕ್ಷಾತೀತವಾಗಿ ಖಂಡಿಸಲೇಬೇಕು. ಪಾತಕಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಮತ್ತೊಮ್ಮೆ ಇಂತಹ ಘಟನೆಗಳು ಮರುಕಳಿಸಲೇಬಾರದು. ರಕ್ಕಸರಷ್ಟೇ ಇಂಥ ಹೇಯ ಕೃತ್ಯ ಎಸಗಲು ಸಾಧ್ಯ. ಕಾನೂನು-ಕಾಯ್ದೆ ಎನ್ನುವುದಕ್ಕಿಂತ ಮನಃಪರಿವರ್ತನೆಯಿಂದಲೇ ಇಂಥ ಕ್ರೂರ ಮನಃಸ್ಥಿತಿಯಿಂದ ಎಲ್ಲರೂ ಹೊರಬೇಕಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


‘ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ ಮತ್ತು ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳೂ ಅಳಿಯುತ್ತವೆ. ಕನ್ಹಯ್ಯ ಅವರ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ’ ಎಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.


ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ: ಬಿಜೆಪಿ ವ್ಯಂಗ್ಯ


‘ಕನ್ಹಯ್ಯ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ. ಕನ್ಹಯ್ಯ ಅವರ ಸಾವು, ‘ಕೊಂದು ವಿಜೃಂಭಿಸುವ ಕಿರಾತಕ ಮನಃಸ್ಥಿತಿಯನ್ನು ಬದಲಿಸಲಿ.’ ಅವರ ಕುಟುಂಬದ ಜತೆ ನಾವೆಲ್ಲರೂ ನಿಲ್ಲೋಣ.’ವೆಂದು ಮನವಿ ಮಾಡಿದ್ದಾರೆ.


ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ: ಸಿದ್ದರಾಮಯ್ಯ


ಸಿದ್ದರಾಮಯ್ಯ ಹೇಳಿದ್ದಾರೆ. ‘ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ