ಬೆಂಗಳೂರು: ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಕೆ ವಿವಾದ ವಿಚಾರವಾಗಿ ಮಂಗಳವಾರ ಅವರು ಸರಣಿ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

‘ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ(Mosques) ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು. ಅದೇರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ  ಹಾಡಿರುವ ‘ನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ’ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.


ನಿಷೇಧಿತ ಸಮಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಸಿದ್ರೆ ಕಾನೂನು ಕ್ರಮ: ಕಮಲ್‌ ಪಂತ್


‘ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ  ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ. ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಏರಿಕೆಯಾಗಲಿದೆ ರಾಜ್ಯ ಸರ್ಕಾರಿ ನೌಕರರ ವೇತನ ! DA ಹೆಚ್ಚಿಸಲು ಸಿಎಂ ಬೊಮ್ಮಾಯಿ ನಿರ್ಧಾರ


Loudspeakers Ban) ಮಾಡುವುದನ್ನು ನಿಲ್ಲಿಸೋಣ’ವೆಂದು ಎಚ್‍ಡಿಕೆ ಮನವಿ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.