ಬೆಂಗಳೂರು: ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಮತ್ತೆ ಗುಡುಗಿದ್ದಾರೆ. ಸೋಮವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕನ್ನಡ ಮತ್ತು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

‘ಕನ್ನಡ(Kannada Language) ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ’ ಅಂತಾ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಡಿಕೆಶಿ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ: ಬಿಜೆಪಿ


‘ನಿನ್ನೆ(ಡಿ.26) ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ-ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆ(Hindi Imposition)ಯ ವಿಪರೀತ. ಅಲ್ಲದೆ ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?’ ಅಂತಾ ಪ್ರಶ್ನಿಸಿದ್ದಾರೆ.


ಸಿಎಂ ಬೊಮ್ಮಾಯಿ, ಗೃಹ ಸಚಿವರು ಸೇರಿ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು ದಾಖಲು, ಕಾರಣ.?


Hindi Imposition) ನಿಲ್ಲಿಸಿ’ ಎಂದು ಎಚ್​ಡಿಕೆ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.