ಬೆಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ(Petrol-Diesel price Hike) ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ! ಇದಪ್ಪಾ ‘ಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತ(BJP Government)ದಲ್ಲಿ ಇಂಡಿಯಾ ಶೈನಿಂಗ್!!’ ಅಂತಾ ಕುಟುಕಿದ್ದಾರೆ.


COMMERCIAL BREAK
SCROLL TO CONTINUE READING

‘13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ. (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ.ಗಳ ಅನುದಾನ:- ಸಿಎಂ ಬಸವರಾಜ ಬೊಮ್ಮಾಯಿ


‘ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ!! ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ!!’ ಎಂದು ಟೀಕಿಸಿದ್ದಾರೆ.


ರಾಜ್ಯ & ಕೇಂದ್ರ ರಾಜಕೀಯದಲ್ಲಿ ಬದಲಾವಣೆ ಇಲ್ಲ: ಭವಿಷ್ಯ ನುಡಿದ ಗೊಂಬೆಗಳು!


‘ಮಾಜಿ ಸಿಎಂ, ಮಾಜಿ ಕೇಂದ್ರ ಮಂತ್ರಿ ಡಿ.ವಿ.ಸದಾನಂದಗೌಡ(DV Sadananda Gowda)ರು ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ ಏಕೆ? ಅಡುಗೆ ಮನೆಗಳಲ್ಲಿ ತಾಯಂದಿರು, ‘ಬೆಲೆ ಏರಿಕೆ ಬೆಂಕಿʼಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ನಾಚಿಕೆಯಾಗಬೇಕು. ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ‘ಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ’ ಎಂದು ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.