ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

‘ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ‘ಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರ್ಕಾರ ಮುಖ ಉಳಿಸಿಕೊಂಡಿದೆ’ ಎಂದು ಹೇಳಿದ್ದಾರೆ.


ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಚಿವ ಟಿ.ಬಿ ಜಯಚಂದ್ರಗೆ ಶಾಕ್!


‘ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ‘ಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ!! ಜಾತಿ-ಧರ್ಮ, ಆಚಾರ-ವಿಚಾರ, ಆಹಾರ-ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ‘ಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ’ವೆಂದು ಕುಮಾರಸ್ವಾಮಿ ಕುಟುಕಿದ್ದಾರೆ.


ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ಹೆಚ್.ಡಿ.ಕುಮಾರಸ್ವಾಮಿ


ಪಿಎಸ್ಐ ನೇಮಕದಲ್ಲಿ ಕಾಸಿನಾಟ, ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ. ಏನು ಸಾಧನೆ ಅಂತ ಸರ್ಕಾರ ಜನರಿಗೆ ಹೇಳುತ್ತದೆ? ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರ್ಕಾರ ಮಾಡಿದ್ದೇನು? ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರ್ಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರ್ಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ‘ನರಹಂತಕ ರಾಜಕಾರಣʼ ನಿಲ್ಲಲಿ’ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.