ಬೆಂಗಳೂರು: ರಾಜ್ಯದಲ್ಲಿ ಬ್ರಾಹ್ಮಣರು ಸಿಎಂ ಆಗುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯರಕರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು’ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ-ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ. ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ’ ಎಂದು ಹೇಳಿದ್ದಾರೆ.


ಬಿಜೆಪಿ ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡಲ್ಲ: ಶಾಸಕ ರಘುಪತಿ ಭಟ್


R Ashok : ಸಿಎಂ ಆಯ್ಕೆ ಹೈ ಕಮಾಂಡ್ ನಿರ್ಧಾರ : ಸಚಿವ ಆರ್ ಅಶೋಕ್ 


ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ’ವೆಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.