ಬೆಂಗಳೂರು: ಭಾರತವು ವಿಶ್ವಗುರುವಾಗಬೇಕು ಎನ್ನುವವರು ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ವೃತ್ತಿಪರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವರದಿಯನ್ನು ಉಲ್ಲೇಖಿಸಿರುವ ಎಚ್​ಡಿಕೆ  ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

‘ವೃತ್ತಿಪರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ ಅತ್ಯಂತ ಕಳವಳಕಾರಿ. ಕರ್ನಾಟಕ(Karnataka)ವೂ ಸೇರಿ ದೇಶಾದ್ಯಂತ 12,500 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಓದಿ ನನಗೆ ತೀವ್ರ ಆಘಾತ ಉಂಟಾಗಿದೆ’ ಅಂತಾ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಅಧಿಕಾರಕ್ಕೆ ಬರುವ ಭ್ರಮೆಯಲ್ಲಿರುವ ಸಿದ್ದರಾಮಯ್ಯ: ಸಚಿವ ವಿ.ಸುನೀಲ್ ಕುಮಾರ್


‘ವೃತ್ತಿಪರ ಶಿಕ್ಷಣ(Higher Education) ಪಡೆಯುತ್ತಿರುವ ಕೆಲ ಶಿಕ್ಷಣಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶಕ್ಕೆ ಶೋಭೆ ತರುವ ವಿಚಾರವಲ್ಲ. ಕೋವಿಡ್-19 ಮತ್ತಿತರೆ ಸಮಸ್ಯೆಗಳಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಮೃತ್ಯುಪಾಶಕ್ಕೆ ತುತ್ತಾಗಿರುವುದು ನಮ್ಮ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ’ ಅಂತಾ ಎಚ್​ಡಿಕೆ ಹೇಳಿದ್ದಾರೆ.


‘ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ  ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೇ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ(Student suicide) ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು. ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ’ ಅಂತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.


Uttara Kannada: ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಆಸ್ಪತ್ರೆಗೆ ದಾಖಲು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.