‘ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ!; ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಆಕ್ರೋಶ

‘ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರ್ಕಾರ! ವಿಸ್ಮಯಗಳ ಆಗರ!!’ವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Written by - Puttaraj K Alur | Last Updated : Nov 18, 2023, 10:16 AM IST
  • ‘ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!!
  • ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ...
  • ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು
‘ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ!; ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಆಕ್ರೋಶ title=
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್ ವಿಚಾರವಾಗಿ ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ‘ಕುಮಾರಸ್ವಾಮಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’ ಎಂದು ಟೀಕಿಸಿದ್ದ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ... ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು.’ ಅಂತಾ ಸಿವಿಲ್ ಪೊಲೀಸ್ ಇನ್ಸ್‍ಪೆಕ್ಟರ್‍ಗಳ ವರ್ಗಾವಣೆ ಪಟ್ಟಿಯ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ಬೆಟ್ಟಿಂಗ್: ಹುಬ್ಬಳ್ಳಿಯಲ್ಲಿ 44 ಮಂದಿಯ ಬಂಧನ!

‘ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರ್ಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿವಿ ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ‘ಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..?’ ಎಂದು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!  ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ?’ ಅಂತಾ ಟೀಕಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್!

‘ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್‌'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ‘ಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ’ವೆಂದು ಕುಮಾರಸ್ವಾಮಿ ಕುಟುಕಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News