ಬೆಂಗಳೂರು: ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸಿದ್ದರಾಮಯ್ಯ ಅವರು ಜಾತ್ಯತೀತ, ಕೋಮುವಾದ ಎಂದು ಹೇಳಿಕೊಂಡೇ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ’ ಎಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯನವರು ಜಾತ್ಯತೀತ ತತ್ವಗಳನ್ನು ಆಚರಣೆ ಮಾಡುವುದಿಲ್ಲವೆಂದು ಕುಟುಕಿರುವ ಕುಮಾರಸ್ವಾಮಿ, ಅವರನ್ನು ಛದ್ಮವೇಷಧಾರಿ, ಡೋಂಗಿ ಸಮಾಜವಾದಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ. 'ಜಾತ್ಯತೀತ ' ಎನ್ನುವ ಟ್ಯಾಗ್‍ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.


ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ, ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್‍ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ‘ಬಿ’ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.


Daily GK Quiz: ಭಾರತದ ಯಾವ ನಗರವನ್ನು "ಸುಗಂಧಗಳ ನಗರ" ಎಂದು ಕರೆಯಲಾಗುತ್ತದೆ?


ಎಂ.ಕೆ.ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಕಿಡಿಕಾರಿದ್ದಾರೆ.  


2006ರಲ್ಲಿ ಬಿಜೆಪಿ ಜೊತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ‘ಬಿ’ ಟೀಂ ಎಂದು ಜೆಡಿಎಸ್‍ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ‘ಬಿ’ ಟೀಂ ಜೊತೆ ಸರ್ಕಾರ ರಚಿಸಲು ಎಚ್.ಡಿ.ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ?? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.


ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ಮಾಜಿ ಸಿಎಂ ಟಾಂಗ್ ನೀಡಿದ್ದಾರೆ.


ಇದನ್ನೂ ಓದಿ: Akash air : ಬಾಂಬ್‌ ಬೆದರಿಕೆಯಿಂದಾಗಿ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನ


ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.