ಬೆಂಗಳೂರು : ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ.ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು.ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಎಂದು ಹೆಚ್ ಡಿಕೆ ಪ್ರಶ್ನಿಸಿದ್ದಾರೆ. ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ. 


ಇದನ್ನೂ ಓದಿ : ಪ್ರಕಾಶ್‌ ರಾಜ್, ಕಮಲ್ ಹಾಸನ್‌ಗೆ ಶೇ.1ರಷ್ಟು ಜನರೂ ಬೆಂಬಲಿಸಲ್ಲ : ಪ್ರಹ್ಲಾದ ಜೋಶಿ ತಿರುಗೇಟು


ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ನನಗೂ ಏನು ಮಾಡಬೇಕು, ಮಾಡಬಾರದು ಎಂದು ಗೊತ್ತಿದೆ.  ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 


ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡ್ತಿಲ್ಲ, ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. 


ಶ್ರೀಗಳನ್ನು ದುರುಪಯೋಗ ಮಾಡಿಕೊಂಡಿಲ್ಲ :
ನಾನು ಎಂದೂ ಸಹ ಅಧಿಕಾರದಲ್ಲಿದ್ದಾಗ ನಮ್ಮ ಸಮುದಾಯದ ಸ್ವಾಮೀಜಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಿಲ್ಲ.ನಾನು ಎಂದೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಾತ್ಯತೀತ ಅಂತ ಹೇಳೋರು, ಪ್ರತೀ ದಿನ ಜಾತಿ ಬಗ್ಗೆಯೇ ಮಾತಾಡ್ತಾರೆ. ನಮ್ಮ ಸಮಾಜದ ಜನ ದಡ್ಡರಲ್ಲ.ಇವರು ನಡೆಸುತ್ತಿರುವ ರಾಜಕೀಯ ಎಲ್ಲರಿಗೂ ಅರ್ಥ ಆಗುತ್ತಿದೆ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ : ಮಂಡ್ಯ ಲೋಕಸಮರ: ಮೈತ್ರಿಗೆ ಟಕ್ಕರ್ ಕೊಡಲು ರಾಹುಲ್ ಗಾಂಧಿ ಎಂಟ್ರಿ; ತ್ರಿಮೂರ್ತಿ ಅಸ್ತ್ರ!


ಪ್ರತಿ ಯುಗಾದಿ ಹಬ್ಬದ ಮೇಲೆ ನಮ್ಮ ಗುರುಗಳ ಆಶೀರ್ವಾದ ಪಡೆಯುವುದು ನಾವು ಪಾಲಿಸಿಕೊಂಡು ಬಂದಿರುವ ಸಂಪ್ರದಾಯ.ನಮ್ಮ ಪಕ್ಷದವರು, ಬಿಜೆಪಿ ನಾಯಕರು ಒಟ್ಟಾಗಿ ಬಂದು ಆಶೀರ್ವಾದ ಪಡೆದಿದ್ದೇವೆ.ಇದರಲ್ಲಿ ತಪ್ಪೇನು?  ಪ್ರಶ್ನಿಸಿದ್ದಾರೆ. 



https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.