ಬೆಂಗಳೂರು: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ನೈಜಬಣ್ಣ ಕೇವಲ ಒಂದೇ ವಾರದಲ್ಲಿಯೇ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸೌಧದಲ್ಲಿ ಬುಧವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದೀಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು.


ರಾಜ್ಯದ ಜನರಿಗೆ ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಅವುಗಳನ್ನು ಜಾರಿ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ಹಾಸನ ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆ: 60ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ


ನಾನು ಕೊಟ್ಟ ಮಾತು ತಪ್ಪಲ್ಲ, ಮಾತಿಗೆ ತಪ್ಪಿದರೆ ಒಂದು ಕ್ಷಣವೂ ಅಧಿಕಾರದಲ್ಲಿರಲ್ಲವೆಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಅವರೆಲ್ಲಾ ಮಾಡಿರುವ ಭಾಷಣಗಳನ್ನು ಜನರು ನೋಡಿದ್ದಾರೆ, ಕೇಳಿದ್ದಾರೆ. ಎಲ್ಲರಿಗೂ ವಿದ್ಯುತ್ ಉಚಿತ ಎಂದು ಭಾಷಣದಲ್ಲಿ ಹೇಳಿದ್ದರು. ಈಗ ನೋಡಿದರೆ ಅದಕ್ಕೆ ಮಾರ್ಗಸೂಚಿ ರಚನೆ ಆಗಬೇಕು ಎನ್ನುತ್ತಿದ್ದಾರೆ. ಅವತ್ತು ವೀರಾವೇಶದಲ್ಲಿ ಮಾತಾಡಿ ಚಪ್ಪಾಳೆ ಗಿಟ್ಟಿಸಿಕೊಂಡರು. ಒಂದೇ ವಾರದಲ್ಲಿ ಅವರ ನಿಜವಾದ ಬಣ್ಣ ಬಯಲಾಗ್ತಿದೆ. ಇವರು ಜನರ ಭಾವನೆಗಳ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಕಾದು ನೋಡೋಣ… ನಂತರ ಜನತೆಯ ಜೊತೆ ಸೇರಿ ಯಾವ ರೀತಿ ಹೋರಾಟ ಮಾಡಬೇಕೋ ಮಾಡುತ್ತೇನೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.


ಹಾದಿ-ಬೀದಿಯಲ್ಲಿ ಹೋಗೋರಿಗೆಲ್ಲಾ ಗ್ಯಾರಂಟಿ ಯೋಜನೆ ಕೊಡಕ್ಕಾಗಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಒಪ್ಪಲಾಗದು. ಮೊದಲು ಭಾಷಣ ಏನು ಮಾಡಿದ್ದರಲ್ಲ, ಅಂದು ಭರವಸೆ ಕೊಡಬೇಕಾದ್ರೆ ನಿಮಗೆ ತಲೆ ಇರಲಿಲ್ಲವಾ? ಈಗ ಮತ ಕೊಟ್ಟವರೆಲ್ಲಾ ಹಾದಿಬೀದಿಯವರು ಆಗಿಬಿಟ್ರಾ‌.? ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.


ಕಳೆದ 2 ದಿನಗಳ ಮಳೆ ಬೆಂಗಳೂರಿನ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎನ್ನುವುದನ್ನು ನಾನು ಬಲ್ಲೆ. ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಆಡಳಿತ ನಡೆಸಿವೆ. ಬೆಂಗಳೂರಿನಲ್ಲಿ ಈಗ ಪ್ರತಿ ಮಳೆಗಾಲದಲ್ಲಿಯೂ ಈ ಸಮಸ್ಯೆಗಳು ಆಗ್ತಿವೆ. ಇದರ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತೆ ಇದೆಯಾ‌? ಎಂದು ಎಚ್‍ಡಿಕೆ ಕಿಡಿಕಾರಿದರು.


ಇದನ್ನೂ ಓದಿ: UPSC ಅಂತಿಮ ಫಲಿತಾಂಶ ಪ್ರಕಟ : ʼಟಾಪ್‌ 3ʼನಲ್ಲಿ ಮಹಿಳೆಯರದ್ದೇ ಮೇಲುಗೈ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.