83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿʼ: ಕಾಂಗ್ರೆಸ್ ನಾಯಕರಿಗೆ ತಿವಿದ ಎಚ್ಡಿಕೆ
ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಮೇಕೆದಾಟು ಯೋಜನೆ ವಿಚಾರವಾಗಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಡಿಕೆಶಿ. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ’ ಅಂತಾ ಟೀಕಿಸಿದ್ದಾರೆ.
Mekedatu Project)ಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ. ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ‘ಬುಲ್ಡೋಜ್ʼ ಮಾಡುವಂಥ ರಾಜಕಾರಣ ‘ಕೈʼ ಪಕ್ಷ ಮಾಡುತ್ತಿದೆ’ ಅಂತಾ ಕಿಡಿಕಾರಿದ್ದಾರೆ.
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ : ಡ್ರಗ್ಸ್ ಜಾಲದಲ್ಲಿ ತೊಡಗಿದ್ದ ಮೂವರು ನೈಜೀರಿಯ ಮೂಲದ ಆರೋಪಿಗಳ ಬಂಧನ
‘ಬೆಂಗಳೂರಿನ ನ್ಯಾಯಯುತ ಪಾಲು ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ(Tamil Nadu) ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ. ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ ನಿಂದ ಹಣವನ್ನೂ ತಂದರು’ ಅಂತಾ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Siddaramaiah) ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ?’ ಅಂತಾ ಪ್ರಶ್ನಿಸಿದ್ದಾರೆ.
‘ಹೌದು, ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ‘ಉತ್ತರಕುಮಾರ ಸಿದ್ದಸೂತ್ರಧಾರʼ ಈಗೇನು ಮಾಡಲು ಸಾಧ್ಯ? ಆದರೆ ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ. ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕ(North Karnataka)ಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ’ ಅಂತಾ ಹೇಳಿದ್ದಾರೆ.
ಕರ್ನಾಟಕ ಬಂದ್ ಮುಂದೂಡಿಕೆ.. ಕನ್ನಡಪರ ಸಂಘಟನೆಗಳ ಒಕ್ಕೂಟಕ್ಕೆ ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಪತ್ರ
‘ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ’ವೆಂದು ಕುಮಾರಸ್ವಾಮಿ ಹೇಳಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.