ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ?: ಕುಮಾರಸ್ವಾಮಿ
Ramanagara Row: ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನರು ತಿರುಗಿಬೀಳುತ್ತಾರೆ, ಜೋಕೆ.. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ?’ ಎಂದು ಪ್ರಶ್ನಿಸಿದ್ದಾರೆ.
‘ಈ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ದರ್ಪದ ಮಾತು ಹೇಳಿದ್ದಾರೆ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ!’ವೆಂದು ಎಚ್‍ಡಿಕೆ ಕುಟುಕಿದ್ದಾರೆ.
‘ಬಡವರ ಹೊಟ್ಟೆ ಮೇಲೆ ಹೊಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ 'ದುಷ್ಟ'ಪ್ರಜ್ಞೆ, 'ಅತಿ' ಬುದ್ಧಿವಂತಿಕೆ, 'ಅಸಾಮಾನ್ಯ' ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ. ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ" ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ!’ವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಊಟದ ವಿಚಾರಕ್ಕೆ ಜಗಳ: ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ..!
‘ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು?’ ಎಂದು ಪ್ರಶ್ನಿಸಿದ್ದಾರೆ.
‘ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಎಚ್.ಡಿ.ದೇವೇಗೌಡರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್ ಅವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ?’ ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.
‘ನಾಡಪ್ರಭು ಕೆಂಪೇಗೌಡರು, ಕೆಂಗಲ್ ಹನುಮಂತಯ್ಯನವರು, ಶಿವಕುಮಾರ ಮಹಾಸ್ವಾಮೀಜಿಗಳು, ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ‘ರಿಯಲ್ ಎಸ್ಟೇಟ್ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್? ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸಿಮೆಂಟ್ ಬಲ್ಕರ್‌ಗೆ ಟಾಟಾ ಸುಮೋ ಡಿಕ್ಕೆ : 12 ಸಾವು, 3 ಜನ ಗಂಭೀರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.