ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆಆರ್‍ಎಸ್, ಎತ್ತಿನಹೊಳೆ, ಕೆಸಿ ವ್ಯಾಲಿ, ಹೆಚ್‍ಎಎಲ್, ಹೆಚ್‍ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ’ ಎಂದು ಟೀಕಿಸಿದ್ದಾರೆ.


ಕಾಂಗ್ರೆಸ್​ನ ‘ರಾಹು’ ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!: ಬಿಜೆಪಿ ಟೀಕೆ


‘ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ? ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ  ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ  ಕೃತ್ಯಕ್ಕೆ ಕಾರಣರು ಯಾರು? ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!


ಕೆಸಿ ವ್ಯಾಲಿ ಎತ್ತುವಳಿಯೂ ಸೇರಿದೆಯಾ? ‘ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ದಾಸಶ್ರೇಷ್ಠ ಶ್ರೀ ಪುರಂದರದಾಸರು ನಿಮ್ಮಂತಹ ವಿಕಾರಿಗಳನ್ನು ನೋಡಿಯೇ ಈ ಪದವನ್ನು ಬರೆದಿರಬಹುದು’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.