ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ಎಂದು ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘2,500 ಕೋಟಿ ರೂ. ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ,  ಸ್ವತಃ ಬಿಜೆಪಿ ಶಾಸಕರೇ!! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ’ ಎಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

‘ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು. ಪ್ರಧಾನಿ ಮೋದಿಯವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, ಬಿಜೆಪಿ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ’ ಎಂದು ಕುಟುಕಿದ್ದಾರೆ.


ಪಠ್ಯಪುಸ್ತಕಗಳ ಮೂಲಕ ಮಕ್ಕಳಲ್ಲಿ ಬಿತ್ತಿದ್ದ ಸುಳ್ಳನ್ನು ತೆಗೆದರೆ ವಿರೋಧವೇಕೆ?: ಬಿಜೆಪಿ


‘ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್‌, ಜೆಡಿಯು, ಆರ್‍ಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ. ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ‌ಬೃಹತ್‌ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ; ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ’ ಎಂದು ಎಚ್‍ಡಿಕೆ ಟಾಂಗ್ ನೀಡಿದ್ದಾರೆ.


ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದೆ: ಡಿಕೆಶಿ


ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.   


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.