ಬೆಂಗಳೂರು: ನಾಳೆ ಅಂದರೆ ಶುಕ್ರವಾರ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಮತದಾನಕ್ಕೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜೆಡಿಎಸ್ ಶಾಸಕರಿಗೆ ಪತ್ರ ಬರೆದಿದ್ದಾರೆ. ‘ಜಾತ್ಯಾತೀತತೆಯ ಪರವಾಗಿ ಆತ್ಮಸಾಕ್ಷಿಯ ಮತವನ್ನು ನಮ್ಮ ಅಭ್ಯರ್ಥಿಗೆ ನೀಡಿ’ ಅಂತಾ ಅವರು ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಸಹ ಮಾಡಿರುವ ಸಿದ್ದರಾಮಯ್ಯ, ‘ಪ್ರಜಾಪ್ರತಿನಿಧಿಗಳೆಲ್ಲರೂ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ಧವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ಜೆಡಿಎಸ್ ಶಾಸಕರಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: 'ಪ್ರಭುತ್ವ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ'-ಸಿದ್ಧರಾಮಯ್ಯ


Rajya Sabha Election 2022 : ರಾಜ್ಯಸಭೆ ಚುನಾವಣೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜು : ಜಯದ ಮಾಲೆ ಯಾರಿಗೆ!?


ಸಿದ್ದರಾಮಯ್ಯ ಪತ್ರಕ್ಕೆ ಎಚ್‍ಡಿಕೆ ಆಕ್ರೋಶ!


‘ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ‘ಒಂದು ಕಾಲದಲ್ಲಿ ಸಿದ್ದರಾಮಯ್ಯ ಬಿಜೆಪಿಗೆ ಟವೆಲ್ ಹಾಕಿದ್ದರು. ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು. ನಮ್ಮ ಪಕ್ಷದ ಶಾಸಕರಿಗೆ ಹೇಗೆ ಪತ್ರ ಬರೆಯುತ್ತೀರಿ? ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಟೀಕೆ ಮಾಡಿದ್ದೀರಿ. ಆತ್ಮಸಾಕ್ಷಿ ಇದ್ದರೆ ಸತ್ಯ ಹೇಳಿ. ಕಾಂಗ್ರೆಸ್ ಕ್ರಾಸ್ ವೋಟಿಂಗ್ ಮಾಡಿಸಿದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ’ವೆಂದು ಎಚ್‍ಡಿಕೆ ಆಕ್ರೋಶ ಹೊರಹಾಕಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.