ಹಳ್ಳಿ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ‘ನೀಟಾಗಿ’ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ?: ಎಚ್​ಡಿಕೆ

‘ಸಮಾನ ಶಿಕ್ಷಣ, ಸಮಾನ ಅವಕಾಶ’ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ ಗಾಳಿಗೆ ಬಿಟ್ಟಿದೆ ಅಂತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Written by - Zee Kannada News Desk | Last Updated : Dec 20, 2021, 03:27 PM IST
  • ಕೇಂದ್ರ ಸರ್ಕಾರಕ್ಕೆ ‘ನೀಟ್‌ʼ ವ್ಯವಸ್ಥೆ ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ
  • ‘ಸಮಾನ ಶಿಕ್ಷಣ, ಸಮಾನ ಅವಕಾಶ’ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ ಗಾಳಿಗೆ ಬಿಟ್ಟಿದೆ
  • ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಶ್ವತವಾಗಿ ವೈದ್ಯ ಶಿಕ್ಷಣ ತಪ್ಪಿಸುವ ದುರಾಲೋಚನೆ
ಹಳ್ಳಿ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ‘ನೀಟಾಗಿ’ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ?: ಎಚ್​ಡಿಕೆ  title=
ಕೇಂದ್ರದ ವಿರುದ್ಧ ಕಿಡಿಕಾರಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ‘ನೀಟಾಗಿʼ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಆತಂಕ ವ್ಯಕ್ತಪಡಿಸಿದ್ದಾರೆ. ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕೇಂದ್ರ ಸರ್ಕಾರಕ್ಕೆ ‘ನೀಟ್‌ʼ ವ್ಯವಸ್ಥೆ(NEET Exam)ಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ’ ಅಂತಾ ಕಿಡಿಕಾರಿದ್ದಾರೆ.

‘ಸಮಾನ ಶಿಕ್ಷಣ, ಸಮಾನ ಅವಕಾಶ’ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ(Central Government) ಗಾಳಿಗೆ ಬಿಟ್ಟಿದೆ. 4 ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್‌ ಕೌನ್ಸೆಲಿಂಗ್‌ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು. ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್‌ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ?’ ಅಂತಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

‘ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರ್ಕಾರಗಳು ಅಸಹಾಯತೆಯ ‘ನಾಟಕʼವಾಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್‌ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್‌ ಸೀಟು(Engineering Seats)ಗಳ ‘ಕಾಳಸಂತೆ ಬಿಕರಿ’ಗೆ ಸರ್ಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ?’ ಅಂತಾ ಎಚ್​ಡಿಕೆ ಪ್ರಶ್ನಿಸಿದ್ದಾರೆ.

‘ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌(Supreme Court)ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ‘ವಿಶ್ವಗುರುʼ ಮಾಡುವ ಉಮೇದಿನಲ್ಲಿರುವ ಕೇಂದ್ರವು ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು. ನೀಟ್‌ ಅವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ ಖಾಸಗಿ ವೈದ್ಯ ಕಾಲೇಜುಗಳ ಜತೆ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು’ ಅಂತಾ ಎಚ್​ಡಿಕೆ ಕುಟುಕಿದ್ದಾರೆ.

ಇದನ್ನೂ ಓದಿ: ಕರುನಾಡಿಗೆ Omicron ಆಪತ್ತು: ಹೊಸ ವರ್ಷದ ಸಂಭ್ರಮಾಚರಣೆಗೆ ಬೀಳುತ್ತಾ ಬ್ರೇಕ್! ಜಾರಿಯಾಗುತ್ತಾ ನೈಟ್ ಕರ್ಫ್ಯೂ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News