ಗುಬ್ಬಿ ಶ್ರೀನಿವಾಸ್ ಜೊತೆ ಜೆಡಿಎಸ್ ಶಾಸಕರ ಭೇಟಿ : ವಿಶೇಷ ಅರ್ಥ ಬೇಡ ಎಂದ ಹೆಚ್.ಡಿ.ಕುಮಾರಸ್ವಾಮಿ
ಇದು ಅವರ ವೈಯುಕ್ತಿಕವಾದ ಭೇಟಿ, ಈ ಮಾತನ್ನು ಅವರೇ ಹೇಳಿದ್ದಾರೆ. ನಾನೇನು ಮಧ್ಯಸ್ಥಿಕೆ ವಹಿಸಿ ಯಾವುದೇ ಸಂದೇಶ ಕಳುಹಿಸಿಲ್ಲ. ಈಗಾಗಲೇ ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ.
ಬೆಂಗಳೂರು : ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ನಮ್ಮ ಶಾಸಕರು ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು
ಸ್ನೇಹಪೂರ್ವಕವಾಗಿ ಭೇಟಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇದು ಅವರ ವೈಯುಕ್ತಿಕವಾದ ಭೇಟಿ, ಈ ಮಾತನ್ನು ಅವರೇ ಹೇಳಿದ್ದಾರೆ. ನಾನೇನು ಮಧ್ಯಸ್ಥಿಕೆ ವಹಿಸಿ ಯಾವುದೇ ಸಂದೇಶ ಕಳುಹಿಸಿಲ್ಲ. ಈಗಾಗಲೇ ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ನಾಗರಾಜ್ ಈಗಾಗಲೇ ಪಕ್ಷದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇದನ್ನೂ ಓದಿ : ಕರ್ನಾಟಕ–ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಸಾ.ರಾ.ಮಹೇಶ್ ಮತ್ತು ಅನ್ನದಾನಿ ಅವರು ಭೇಟಿ ಮಾಡಿರುವ ಬಗ್ಗೆ ಅಪಾರ್ಥ ಬೇಡ. ಅದರ ಬಗ್ಗೆ ಹೆಚ್ಚು ಚರ್ಚೆಯೂ ಅಗತ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.
ಇದನ್ನೂ ಓದಿ : "ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ"
ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.