ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ, ಶಿಶುಗಳ ಸಾವು: ಸಚಿವ ಸುಧಾಕರ್ ರಾಜೀನಾಮೆಗೆ ಎಚ್‍ಡಿಕೆ ಆಗ್ರಹ
ಜಿಲ್ಲಾಸ್ಪತ್ರೆಯಲ್ಲೇ ಇಂತಹ ದುಃಸ್ಥಿತಿ ಇದ್ದರೆ ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು? ಹೇಳಿ ಸಚಿವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸುಧಾಕರ್ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ‘ಸಾವುಗೇಡಿ ಸರ್ಕಾರʼದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು’ ಎಂದು ಟೀಕಿಸಿದ್ದಾರೆ.
‘ಡಾ.ಸುಧಾಕರ್ ಅವರೇ ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ; ಆ ಬಾಣಂತಿ, ಆಕೆಯ 2 ನವಜಾತ ಶಿಶುಗಳ ಧಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆ’ವೆಂದು ಎಚ್‍ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು"?
ಬಿಜೆಪಿ ಸರ್ಕಾರಕ್ಕೆ ಇದೆಯಾ?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: B.Sriramulu : 'ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ ಕ್ಷೇತ್ರ ಹುಡುಕಿಕೊಂಡು ಹೋಗ್ತಿದ್ದಾರೆ'
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.