ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡರ ಪುತ್ರಿ 3 ವರ್ಷದ ಗೌರಿ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು.


COMMERCIAL BREAK
SCROLL TO CONTINUE READING

ಅನಾರೋಗ್ಯದಿಂದ ನಿಧನ ಹೊಂದಿದ ಮೊಮ್ಮಗಳ ಅಗಲಿಕೆ ನೋವಿನಲ್ಲಿರುವ ಜಿ.ಟಿ.ದೇವೇಗೌಡರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಎಚ್‍ಡಿಕೆ ಗೌರಿ ತಂದೆ-ತಾಯಿ ಮತ್ತು ಕುಟುಂಬಸ್ಥರಿಗೂ ಸಾಂತ್ವನ ಹೇಳಿದರು.


ಇದನ್ನೂ ಓದಿ: ಡಿಕೆಶಿಗೆ ಹುಟ್ಟುಹಬ್ಬದ ಕೇಕ್ ತಿನ್ನಿಸದ ಪ್ರಿಯಾಂಕಾ ಗಾಂಧಿ: ಬಿಜೆಪಿ ವ್ಯಂಗ್ಯ


ಜಿ.ಟಿ.ದೇವೇಗೌಡರ ಮೊಮ್ಮಗಳು 3 ವರ್ಷದ ಗೌರಿಯನ್ನು ಅನಾರೋಗ್ಯ ನಿಮಿತ್ತ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲು ಮಾಡಲಾಗಿತ್ತು. ಆದರೆ, ಇದ್ದಕ್ಕಿದ್ದಂತೆಯೇ ಆರೋಗ್ಯದಲ್ಲಿ ಏರುಪೇರು ಉಂಟಾಗಿ ನಿಧನ ಹೊಂದಿದ್ದಳು. ಭಾನುವಾರ ಗುಂಗ್ರಾಲ್ ಛತ್ರದ ಗೌಡರ ತೋಟದಲ್ಲಿ ಗೌರಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.  


ಪುಟ್ಟ ಕಂದಮ್ಮ ಗೌರಿ ನಿಧನಕ್ಕೆ ಇಡೀ ಗ್ರಾಮವೇ ಕಂಬನಿ ಮಿಡಿದಿತ್ತು. ಜಿ.ಟಿ.ದೇವೇಗೌಡರ ಕುಟುಂಬಸ್ಥರು ಕೂಡ ಗೌರಿ ಅಗಲಿಕೆಯಿಂದ ಆಘಾತಕ್ಕೊಳಗಾಗಿದ್ದರು. ಈ ಹಿನ್ನೆಲೆ ಜಿಟಿಡಿ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ದುಃಖದಲ್ಲಿದ್ದ ಕುಟುಂಬಕ್ಕೆ ಸಾಂತ್ವನ ಹೇಳಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡರನ್ನು ಸಂತೈಸಿದರು.


ಇದನ್ನೂ ಓದಿ: ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಲೇ ದೇಶ ಆಳಿದವರು: ಬಿಜೆಪಿ ಟೀಕೆ


ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಅಶ್ವಿನ್ ಕುಮಾರ, ಅನ್ನದಾನಿ, ಕೆ.ಮಹದೇವ್ ಮುಂತಾದವರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.