ಬೆಂಗಳೂರು: ಶೀಘ್ರವೇ ರಾಹುಲ್ ಗಾಂಧಿಗೆ ಸಿದ್ದು ಸ್ಕ್ಯಾಂ ದಾಖಲೆಗಳನ್ನು ರವಾನಿಸಲಾಗುವುದು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು, ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ’ ಅಂತಾ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

‘ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿಯವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ಮೋದಿ ಮತ್ತು ನೀವು ಪ್ರಧಾನಿ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ. ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲವೆಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬೊಮ್ಮಾಯಿಯವರೇ, ವಿಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಸಿಎಂ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ’ ಎಂದು ಕುಟುಕಿದ್ದಾರೆ.


ನ.11ಕ್ಕೆ ಪ್ರಧಾನಿ ಮೋದಿಯಿಂದ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ


‘ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ. ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ‘ಆಪರೇಷನ್ ಕಮಲ’ದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ’ವೆಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.


ಪೇ ಸಿಎಂ ನಂತರ SayCM.com ಪ್ರಾರಂಭಿಸಿದ ಕರ್ನಾಟಕ ಕಾಂಗ್ರೆಸ್


‘ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಗಾಂಧಿಯವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ’ ಅಂತಾ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ