ಬೆಂಗಳೂರು: ಸುಪ್ರೀಂಕೋರ್ಟ್(Supreme Court) ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ(Siddaramaiah) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

Caste Census Report)ಯನ್ನು ಸಂಗ್ರಹಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು’ ಅಂತಾ ಹೇಳಿದ್ದಾರೆ.


ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ


‘ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯ ಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್(Supreme Court) ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು’ ಅಂತಾ ಒತ್ತಾಯಿಸಿದ್ದಾರೆ.


ಮಗನ ಮುಖಕ್ಕೆ ಮಸಾಲೆ ಹಚ್ಚಿ ತಾಯಿಯಿಂದಲೇ ಚಿತ್ರಹಿಂಸೆ; ವಿಡಿಯೋ ವೈರಲ್


‘ಸುಪ್ರೀಂಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್–ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು’ ಅಂತಾ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


‘ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ. ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದ ಕಾರಣಕ್ಕೆ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.