ಮೊಟ್ಟೆ ಖರೀದಿಯಲ್ಲಿ ಕಮಿಷನ್ ನುಂಗಿದವರಿಂದ ಮಕ್ಕಳ ಅನ್ನದ ತಟ್ಟೆಗೆ ಕೈ: ಸಿದ್ದರಾಮಯ್ಯ

ಆಹಾರ ನಿಗಮದ ಅಧಿಕಾರಿಗಳು ಕಳಪೆ ಬೇಳೆ ಸರಬರಾಜು ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳದೆ ಇರುವುದಕ್ಕೆ ಏನು ಕಾರಣ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Jan 17, 2022, 09:37 PM IST
  • ಶಾಲಾ ಮಕ್ಕಳ ಬಿಸಿಯೂಟಕ್ಕೆ ಕಳಪೆ ಗುಣಮಟ್ಟದ ಬೇಳೆಕಾಳು ಸರಬರಾಜು ವಿಚಾರ
  • ಬಿಜೆಪಿ ಸರ್ಕಾರ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ
  • ಆಹಾರ ನಿಗಮದ ಅಧಿಕಾರಿಗಳೇ ಷಾಮೀಲಾಗಿದ್ದರೂ ಬಿಜೆಪಿ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ
ಮೊಟ್ಟೆ ಖರೀದಿಯಲ್ಲಿ ಕಮಿಷನ್ ನುಂಗಿದವರಿಂದ ಮಕ್ಕಳ ಅನ್ನದ ತಟ್ಟೆಗೆ ಕೈ: ಸಿದ್ದರಾಮಯ್ಯ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಶಾಲಾ ಮಕ್ಕಳ ಬಿಸಿಯೂಟ(Midday Meal Scheme)ಕ್ಕೆ ಕಳಪೆ ಗುಣಮಟ್ಟದ ಬೇಳೆಕಾಳು ಸರಬರಾಜು ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. #ಬಿಸಿಯೂಟ ವಿಚಾರವಾಗಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

‘ಮಕ್ಕಳಿಗೆ ವಿಷವುಣಿಸುವ ಈ ಕುಕೃತ್ಯದಲ್ಲಿ ಆಹಾರ ನಿಗಮದ ಅಧಿಕಾರಿಗಳೇ ಷಾಮೀಲಾಗಿದ್ದರೂ ರಾಜ್ಯದ ಬಿಜೆಪಿ ಸರ್ಕಾರ(BJP Government) ಕಣ್ಣುಮುಚ್ಚಿ ಕುಳಿತಿದೆ. ಶ್ರೀರಂಗಪಟ್ಟಣ, ಮಂಡ್ಯ, ಮದ್ದೂರು, ದಾವಣಗೆರೆ, ಬಳ್ಳಾರಿಯಲ್ಲಿ ಕಳಪೆ ಬೇಳೆ ಪೂರೈಕೆಯ ದೂರುಗಳಿದ್ದರೂ ಆಹಾರ ನಿಗಮದ ಅಧಿಕಾರಿಗಳು ಕಳಪೆ ಬೇಳೆ ಸರಬರಾಜು ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳದೆ ಇರುವುದಕ್ಕೆ ಏನು ಕಾರಣ? ಲಂಚದ ಹಣದಲ್ಲಿ ಯಾರೆಲ್ಲ ಪಾಲುದಾರರಿದ್ದಾರೆ’ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Bangalore Crime : ಪತ್ನಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ ಪತಿ!

‘ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಕ್ಷೀರಭಾಗ್ಯ ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಸರ್ಕಾರ, ಮೊಟ್ಟೆ ಖರೀದಿಯಲ್ಲಿಯೂ ಕಮಿಷನ್ ನುಂಗಿದ ಆರೋಪ ಕೇಳಿ ಬಂದಿತ್ತು. ಈಗ ಮಕ್ಕಳ ಅನ್ನದ ತಟ್ಟೆಗೆ ಕೈ ಹಾಕಿದೆ. ಈ ಸಚಿವರು, ಅಧಿಕಾರಿಗಳು ಹೊಟ್ಟೆಗೆ ಏನು ತಿನ್ನುತ್ತಿದ್ದಾರೆ? ಅಂತಾ ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.

‘ಕಳಪೆ ಗುಣಮಟ್ಟದ ಬೇಳೆ ಸರಬರಾಜು ಮಾಡುತ್ತಿರುವ ಕಂಪನಿಗಳನ್ನು ತಕ್ಷಣ ಬ್ಲಾಕ್ ಲೀಸ್ಟ್ ಗೆ ಸೇರಿಸಬೇಕು ಮತ್ತು ಕಂಪನಿಗಳ ಜೊತೆ ಷಾಮೀಲಾಗಿ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರನ್ನು ಒತ್ತಾಯಿಸುತ್ತೇನೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ: ಅರ್ಜಿ ಸಲ್ಲಿಸಲು ಕೊನೆದಿನ ಯಾವುದು ಗೊತ್ತಾ..? 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News