ಬೆಂಗಳೂರು: RSS ತಂಟೆಗೆ ಬರಬೇಡಿ…ಹುಷಾರ್! ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ‘RSS ತಂಟೆಗೆ ಬಂದರೆ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ’ ಎಂದು ವಾರ್ನಿಂಗ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿವಾಸದ ಮುಂಭಾಗ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮನೆಗೆ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದಾರೆಂಬ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ‘ರಾಜ್ಯದಾದ್ಯಂತ ಚಡ್ಡಿಗೆ ಬೆಂಕಿ ಹಾಕುವ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದರು.


ನನಗೆ ಈ ಶಿಕ್ಷೆ ಕಡಿಮೆ, ಇನ್ನೂ ಶಿಕ್ಷೆ ಆಗ್ಬೇಕು: ಯುವತಿ ಒಪ್ಪಿದ್ರೆ ಮದುವೆ ಆಗ್ತಾನಂತೆ ಆ್ಯಸಿಡ್ ನಾಗ


ಸಿದ್ದರಾಮಯ್ಯ ಹೇಳಿಕೆಯಿಂದ ಗರಂ ಆಗಿರುವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ, ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ? ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. RSS ತಂಟೆಗೆ ಬರಬೇಡಿ…ಹುಷಾರ್’ ಎಂದು ಎಚ್ಚರಿಸಿದ್ದಾರೆ.


ಚಡ್ಡಿಯನ್ನೇ ಬಿಜೆಪಿ ಧ್ವಜವನ್ನಾಗಿ ಸ್ವೀಕರಿಸಿದೆಯಾ..?


ಈಶ್ವರಪ್ಪನವರ ಬುಡ ಚಟಪಟ ಸಿಡಿಯುತ್ತಿರುವುದೇಕೆ? ಚಡ್ಡಿಗೆ ಬಿಜೆಪಿ ಪೇಟೆಂಟ್ ಇದೆಯಾ? ಅಥವಾ ಚಡ್ಡಿಯನ್ನೇ ಬಿಜೆಪಿ ಧ್ವಜವನ್ನಾಗಿ ಸ್ವೀಕರಿಸಿದೆಯಾ..?’ ಎಂದು ಪ್ರಶ್ನಿಸಿದೆ.


ಇದನ್ನೂ ಓದಿ: ಖರ್ಗೆ ಮೇಲುಗೈ ಆಗುತ್ತದೆಂಬ ಭಯದಿಂದ ಡಿಕೆಶಿ-ಸಿದ್ದರಾಮಯ್ಯರಿಂದ ಹೊಂದಾಣಿಕೆ ನಾಟಕ: ಬಿಜೆಪಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.