ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಭಾಗವಾಗಿ ಸದ್ದು ಮಾಡುತ್ತಿರುವ ‘ಆಪರೇಷನ್ ಕಮಲ’ ತೆರೆಮರೆಯಲ್ಲಿ ಚಾಲ್ತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ಮಾಜಿ ಸಚಿವ ಮುರುಗೇಶ್ ನಿರಾಣಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
‘ಆಪರೇಷನ್ ಕಮಲ’ ವಿಚಾರವಾಗಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಮುರುಗೇಶ್ ನಿರಾಣಿ, ‘ಸ್ವಲ್ಪ ಕಾದು ನೋಡಿ’ ಎಂದು ಹೇಳಿದ್ದಾರೆ. ಹೀಗೆ ಹೇಳುವ ಮೂಲಕ ಅವರು ಪರೋಕ್ಷವಾಗಿ ರಾಜ್ಯದಲ್ಲಿ ‘ಆಪರೇಷನ್ ಕಮಲ’ ನಡೆಯುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಪ್ರಯಾಣಿಕರಿಗೆ ಹೊಸ ಸೌಲಭ್ಯ!
ಈ ಸರ್ಕಾರ 5 ವರ್ಷ ಇರಲಿ, ಇರಲಿಲ್ಲ ಅಂದರೆ ನಾವೇನು ಮಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ ಮೈತ್ರಿ ಸರ್ಕಾರ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ್ ಅಲೈಯನ್ಸ್ ಸರ್ಕಾರ’ವೆಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಅಲೈಯನ್ಸ್ ಸರ್ಕಾರದ ನೇತೃತ್ವವನ್ನು ಸಿಎಂ ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ. ಅವರವರ ಜಗಳದಲ್ಲಿಯೇ ಈ ಸರ್ಕಾರ ಪತನವಾಗಲಿದೆ. ನಾವು ಯಾವುದೇ ‘ಆಪರೇಷನ್ ಕಮಲ’ ಮಾಡಲ್ಲ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರವಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುರುಗೇಶ್ ನಿರಾಣಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಕ್ಯಾಪ್ಸಿಕಂ ವ್ಯವಸಾಯದಿಂದ ಲಕ್ಷ-ಲಕ್ಷ ಆದಾಯ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.