ಮಾಜಿ ಪ್ರಧಾನಿ H.D Devegowdaರಿಗೆ ಹುಟ್ಟುಹಬ್ಬದ ಸಂಭ್ರಮ: ʼಮಣ್ಣಿನ ಮಗʼನಿಗೆ 90ರ ಹರೆಯ...!
ದೇವೇಗೌಡರು ಮೇ 18, 1933ರಲ್ಲಿ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಶೈಕ್ಷಣಿಕವಾಗಿ ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದ ಅವರು 1953ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. 1962ರವರೆಗೆ ಪಕ್ಷಕ್ಕಾಗಿ ದುಡಿದ ದೇವೇಗೌಡರು ಬಳಿಕ ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ನಿಂತು ವಿಧಾನಸಭೆಗೆ ಕಾಲಿಟ್ಟರು.
ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ ಎಂದರೆ ಕರ್ನಾಟಕದ ಪ್ರತಿಯೊಬ್ಬರಿಗೂ ಚಿರಪರಿಚಿತ ನಾಮ. ಹೆಚ್‌ಡಿಡಿ, ಹೆಚ್.ಡಿ ದೇವೇಗೌಡರು, ದೊಡ್ಡಗೌಡರು ಎಂಬೆಲ್ಲಾ ಹೆಸರಿನಿಂದ ಪ್ರಸಿದ್ಧ ಪಡೆದ ಇವರು ಕರ್ನಾಟಕದ ಮಣ್ಣಿನ ಮಗ. ರೈತಪರ ಕಾಳಜಿ ಉಳ್ಳ ಇವರು ಕರ್ನಾಟಕದಿಂದ ಪ್ರಧಾನಮಂತ್ರಿ ಪಟ್ಟಕ್ಕೇರಿದ ಏಕೈಕ ವ್ಯಕ್ತಿ.
ಇದನ್ನು ಓದಿ: Vegetable Price: ಹುಳಿಯಾಗುತ್ತಿದೆ ಟೊಮ್ಯಾಟೋ ಬೆಲೆ: ಇಲ್ಲಿದೆ ಇಂದಿನ ತರಕಾರಿ ದರ
ದೇವೇಗೌಡರು ಮೇ 18, 1933ರಲ್ಲಿ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಶೈಕ್ಷಣಿಕವಾಗಿ ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದ ಅವರು 1953ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. 1962ರವರೆಗೆ ಪಕ್ಷಕ್ಕಾಗಿ ದುಡಿದ ದೇವೇಗೌಡರು ಬಳಿಕ ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ನಿಂತು ವಿಧಾನಸಭೆಗೆ ಕಾಲಿಟ್ಟರು. ಭಾರತದ 12ನೇ ಪ್ರಧಾನಮಂತ್ರಿಯಾದ ದೇವೇಗೌಡರು ಸ್ವತಂತ್ರ್ಯ ಪಕ್ಷವನ್ನೇ ಕಟ್ಟಿ ಆಡಳಿತ ನಡೆಸಿದವರು. ಜೊತೆಗೆ ರಾಜಕೀಯದಲ್ಲಿ ರಾಮಕೃಷ್ಣ ಹೆಗಡೆಯವರನ್ನು ಮಿತ್ರರನ್ನಾಗಿಸಿಕೊಂಡರು.
ಸತತವಾಗಿ ಹೊಳೆನರಸೀಪುರ ಕ್ಷೇತ್ರದಿಂದ ವಿಧಾನಸಭೆಗೆ ಚುನಾಯಿತರಾದ ದೇವೇಗೌಡರು, 1972ರಿಂದ 1976ರವರೆಗೆ ಮತ್ತು ನವೆಂಬರ್ 1976ರಿಂದ 1977ರವರೆಗೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕನಾಗಿದ್ದರು. 1975ರಿಂದ 1976ರವರೆಗೆ ಜಾರಿಯಲ್ಲಿದ್ದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬಂಧನಕ್ಕೊಳಗಾಗಿದ್ದರು.
ಇನ್ನು ಲೋಕೋಪಯೋಗಿ ಮತ್ತು ನೀರಾವರಿ ಖಾತೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ, 1987ರಲ್ಲಿ ನೀರಾವರಿ ಖಾತೆಗೆ ಸಾಕಷ್ಟು ಹಣ ಮಂಜೂರು ಮಾಡದೆ ಇದ್ದುದರ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ಆ ಬಳಿಕ 1991ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಿಂತು ಲೋಕಸಭೆ ಪ್ರವೇಶ ಮಾಡಿದರು. ಈ ಬಳಿಕ ಜೆಡಿಎಸ್‌ನ ರಾಜ್ಯಾಧ್ಯಕ್ಷರಾದದ ಅವರು 1994ರಲ್ಲಿ ಕರ್ನಾಟಕದ 14ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಆ ಬಳಿಕ
1996ರಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಲೋಕಸಭೆಯಲ್ಲಿ ಸ್ಪಷ್ಟಬಹುಮತ ಸಿಗದ ಕಾರಣ, ಯುನೈಟೆಡ್ ಫ್ರಂಟ್ ಕಾಂಗ್ರೆಸ್ ಬೆಂಬಲದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ತೀರ್ಮಾನಿಸಲಾಯಿತು. ಆಗ ಆ ಸರ್ಕಾರದ ಮುಖ್ಯಸ್ಥರನ್ನಾಗಿ ದೇವೇಗೌಡರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ಭಾರತ 11ನೇ ಪ್ರಧಾನಿಯಾಗಿ ಜೂನ್ 1, 1996ರಲ್ಲಿ ಅಧಿಕಾರ ವಹಿಸಿಕೊಂಡರು. 1997ರ ಏಪ್ರಿಲ್ ವರೆಗೆ ಪ್ರಧಾನಿಯಾಗಿದ್ದ ದೇವೇಗೌಡರು ಬಳಿಕ ಜೆಡಿಎಸ್‌ನ ರಾಷ್ಟ್ರಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.
ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ದೇವೇಗೌಡ ಅವರ ಮಗಳು ಚೆನ್ನಮ್ಮ ಅವರನ್ನು 1954ರಲ್ಲಿ ದೇವೇಗೌಡರು ವಿವಾಹವಾದರು. ಈ ದಂಪತಿಗೆ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಸೇರಿದಂತೆ ನಾಲ್ಕು ಜನ ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎಚ್.ಡಿ. ಕುಮಾರಸ್ವಾಮಿಯವರು ಕರ್ನಾಟಕದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಎಚ್.ಡಿ. ರೇವಣ್ಣ ಅವರು ಕರ್ನಾಟಕ ಸರ್ಕಾರದಲ್ಲಿ ಮಂತ್ರಿಗಳಾಗಿದ್ದವರು.
ದೇವೇಗೌಡರವರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದಾರೆ. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 1962ರ ತನಕ ಆ ಪಕ್ಷದಲ್ಲೇ ಸದಸ್ಯರಾಗಿ ಉಳಿದಿದ್ದರು. ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ ರೈತನ ಬದುಕಿನ ಕಷ್ಟಗಳು ಚೆನ್ನಾಗಿ ತಿಳಿದಿದ್ದವು. ಯುವ ಗೌಡರು, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗುವುದಾಗಿ ಘೋಷಿಸಿದ್ದರು.
ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕೆಳ ಸ್ತರದಿಂದ ಆರಂಭಿಸಿದ ಇವರ ಹೋರಾಟದ ಬದುಕು ರಾಜಕೀಯ ರಂಗದಲ್ಲಿ ಹಂತ ಹಂತವಾಗಿ ಮೇಲೇರಿತು. ಆಂಜನೇಯ ಸಹಕಾರ ಸಂಘದ ಅಧ್ಯಕ್ಷರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾಗಲೇ ಬಡಜನರ ಸೇವೆಯಲ್ಲಿ ಹೆಸರಾಗಿದ್ದರು.
ಇದೀಗ 90ರ ಹರೆಯಕ್ಕೆ ಕಾಲಿಟ್ಟ ಹೆಚ್‌ಡಿ ದೇವೇಗೌಡರು ನೂರು ಕಾಲ ಚೆನ್ನಾಗಿ ಬಾಳಲಿ ಎಂಬುದೇ ಎಲ್ಲರ ಹಾರೈಕೆ.
ಇದನ್ನು ಓದಿ: ಜೀವಕ್ಕೆ ಅಪಾಯ ತಂದ ʼಇಡ್ಲಿʼ: 15 ಮಂದಿ ಆಸ್ಪತ್ರೆಗೆ ದಾಖಲು
ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ:
"ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ದಯಪಾಲಿಸಲಿ" ಎಂದು ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.