12 ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ: ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ,
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದರು.
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದರು.
ಈ ಸಭೆಯಲ್ಲಿ ಅವರು, ಸ್ಪರ್ಧಾತ್ಮಕ ಪರೀಕ್ಷೆ (Exam) ಯಲ್ಲಿ ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಇದನ್ನೂ ಓದಿ: ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಧಾರವಾಡ ಯುವಕನಿಗೆ ಅಭಿನಂದನೆಗಳ ಮಹಾಪೂರ
ವಿಚ್ಛಿದ್ರಕಾರಿ ಶಕ್ತಿಗಳು ಪರೀಕ್ಷಾ ವ್ಯವಸ್ಥೆಯನ್ನು ಹಾಳುಗೆಡವಲು ಅಥವಾ ಈ ನೇಮಕಾತಿ ಪ್ರಕ್ರಿಯೆಗೆ ಕಳಂಕ ತರಲು ಆಸ್ಪದ ಕೊಡಬಾರದು. ಹಾಗೇನಾದರೂ ಆದರೆ, ಪರೀಕ್ಷಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
33 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಬೆಂಗಳೂರು ನಗರ, ಮೈಸೂರು (Mysuru), ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿಗಳಲ್ಲಿ ನಡೆಯಲಿವೆ. ಇದಕ್ಕಾಗಿ 1,409 ಕೊಠಡಿ ಮೇಲ್ವಿಚಾರಕರು, 82 ವೀಕ್ಷಕರು, 82 ಕಸ್ಟೋಡಿಯನ್ಸ್ ಮತ್ತು 164 ಮಂದಿಯ ವಿಶೇಷ ಜಾಗೃತ ದಳವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Araga Jnanendra : ತಮಿಳುನಾಡು ಸಚಿವರ ಮಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಯ
12 ಮತ್ತು 13ರಂದು 82 ಪರೀಕ್ಷಾ ಕೇಂದ್ರಗಳಲ್ಲಿ, 14ರಂದು 22, 15 ರಂದು 24 ಮತ್ತು 16ರಂದು 8 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳು ಸೂಚಿತ ವಸ್ತ್ರಸಂಹಿತೆಯನ್ನು ಪಾಲಿಸಬೇಕು. ಜತೆಗೆ, ಅಕ್ರಮಗಳ ತಡೆಗೆ ಸಹಾಯವಾಣಿಯನ್ನೂ (ಮೊಬೈಲ್ 99015-81708) ರಚಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಜ್ಣ ಜಾರಿಗೊಳಿಸಲು ಸೂಚಿಸಲಾಗಿದೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ