ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ 06 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

Last Updated : Sep 30, 2020, 06:13 PM IST
ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ title=

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ 06 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು ಆಯ್ಕೆ ಕ್ಷೇತ್ರಗಳಿಗೆ ನೀಡುವ ಸಲುವಾಗಿ ಕಲೆ, ಸಾಂಸ್ಕೃತಿಕ, ಸಂಗೀತ, ಕ್ರೀಡೆ, ನಾವೀನ್ಯತೆ(ಇನ್ನೋವೇಷನ್), ತಾರ್ಕಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಅರ್ಜಿ ಸಲ್ಲಿಸಬಹುದು.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಾಧನೆ ಕುರಿತ ಪ್ರಕರಣವು ಆಗಸ್ಟ್-2019 ರಿಂದ ಜುಲೈ -2020 ರೊಳಗೆ ನಡೆದಿರಬೇಕು.ಪ್ರಶಸ್ತಿಗಾಗಿ ಜಿಲ್ಲಾ ಮಟ್ಟದಲ್ಲಿ ಪ್ರತಿಭೆಯನ್ನು ಗುರುತಿಸಿರಬೇಕು. ಈ ಬಗ್ಗೆ ದಿನ ಪ್ರತಿಕೆಗಳ ಪ್ರಕಟಣೆ ತುಣುಕುಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು ಭರ್ತಿ ಮಾಡಿ, ಅಕ್ಟೋಬರ್ 05 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯ  ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News