ಬೆಂಗಳೂರು : ಬಿಜೆಪಿ ಸರಕಾರ ಅವಧಿಯಲ್ಲಿ ನಡೆದ ಪಿ ಎಸ್ ಐ, ಬಿಟ್ ಕಾಯಿನ್, ಗಂಗಾಕಲ್ಯಾಣ ಯೋಜನೆಯ ಅಕ್ರಮಗಳ ಬಗ್ಗೆ SIT ತನಿಖೆ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ, ಮುಂದಿನ ಕ್ಯಾಬಿನೆಟ್ ನಲ್ಲಿ ತನಿಖೆಗೆ ಆದೇಶ ಮಾಡಲು ನಿರ್ದಾರ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವ ಸಂಪುಟ ಸಭೆಯಲ್ಲಿ ಆಗಿದ್ದೇನು?


ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಂದಾಯ ಸಚಿವ ಕೃಷ್ಣೆಬೈರೇಗೌಡ ಹಾಗೂ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಪಿಎಸ್ಐ, ಬಿಟ್ ಕಾಯಿನ್ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಕ್ರಮಗಳ ಬಗ್ಗೆ ಸದ್ದು ಮಾಡಿ ಜನರ ಗಮನ ಸೆಳೆದಿತ್ತು,ಈಗ ನಾವು ಈ ಅಕ್ರಮಗಳ ಬಗ್ಗೆ ತನಿಖೆ ಮಾಡಲು ಆದೇಶ ಮಾಡಿಲ್ಲ ಎಂದರೆ ಇದು ಕೂಡ ಹೊಂದಾಣಿಕೆ ರಾಜಕಾರಣ ಎಂದು ಗೋಚರ ಆಗಲಿದೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಒತ್ತಾಯ ಮಾಡಿದರು.


ಈ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ನಲ್ಲಿ ಬಿಜೆಪಿ ವಿರುದ್ಧ ತನಿಖೆಗೆ ಆದೇಶ ಮಾಡಲು ತೀರ್ಮಾನ ನೀಡುವುದಾಗಿ ತಿಳಿಸಿದ್ದಾರೆ.ಮುಂದಿನ ಕ್ಯಾಬಿನೆಟ್ ಸಂದರ್ಭದಲ್ಲಿ ವಿಶೇಷ ತನಿಖಾ ತಂಡ ರಚಿಸುವ ಮೂಲಕ ಬಿಜೆಪಿ ಅಧಿಕಾರಾವಾಧಿಯ ಹಗರಣಗಳನ್ನ ಕಾಂಗ್ರೆಸ್ ಸರ್ಕಾರ  ತನಿಖೆಗೆ ಆದೇಶ ಮಾಡಲಿದೆ ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ