ಕರ್ನಾಟಕದಲ್ಲಿ ₹ 6000 ಕೋಟಿ ಹೂಡಿಕೆಗೆ ಮುಂದಾದ ಎಕ್ಸೈಡ್ ಇಂಡಸ್ಟ್ರೀಸ್
ಮಾರ್ಚ್ 31: ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ.
ಬೆಂಗಳೂರು: ಮಾರ್ಚ್ 31: ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ.
ಈ ವಿಚಾರವಾಗಿ ಗುರುವಾರದಂದು ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ (Murugesh Nirani) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಎಕ್ಸೈಡ್ ಇಂಡಸ್ಟ್ರೀಸ್ (Exide Industries) ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಇದು ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಸುಬೀರ್ ಚಕ್ರವರ್ತಿ ಹೇಳಿದರು.
ಇದನ್ನೂ ಓದಿ: ರಾಜ್ಯ ಸರಕಾರಕ್ಕೆ ಗಡುವು ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.ಈ ಕಂಪನಿಗೆ ಎಲ್ಲಾ ರೀತಿಯ ಸರಕಾರ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಅವರು ಈ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.
ಇದನ್ನೂ ಓದಿ: ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ಮೀನಾಮೇಷ ಮಾಡಬಾರದು- ಬಿ.ಕೆ.ಹರಿಪ್ರಸಾದ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಸಕ್ರಿಯವಾಗಿದ್ದು, ಕರ್ನಾಟಕದಲ್ಲಿ ಇರುವಂತಹ ಹೂಡಿಕೆದಾರ ಸ್ನೇಹಿ ವಾತಾವರಣ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.ಕಳೆದ ಮೂರು ತ್ರೈಮಾಸಿಕಗಳಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ )ಆಕರ್ಷಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ಸುಬೀರ್ ಚಕ್ರವರ್ತಿ ಅವರಿಗೆ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.