ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಅಸ್ತು

ಕೇಂದ್ರ ಸಚಿವ ಸಂಪುಟ ಐಐಟಿಗಳ ಅಭಿವೃದ್ಧಿ ಮತ್ತು ಸಾಮರ್ಥ್ಯ ವಿಸ್ತರಣೆಗೆ ಕೈಗೊಂಡ ಈ ನಿರ್ಣಯ, ಕೌಶಲ್ಯಪೂರ್ಣ ಕಾರ್ಯಪಡೆಯನ್ನು ಸೃಷ್ಟಿಸುತ್ತದೆ. ನಾವೀನ್ಯತೆಗೆ ಚಾಲನೆ ನೀಡುವ ಮೂಲಕ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಮೂಲಕ ರಾಷ್ಟ್ರ ನಿರ್ಮಾಣವನ್ನು ಉತ್ತೇಜಿಸುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ  ತಿಳಿಸಿದ್ದಾರೆ.

Written by - Ranjitha R K | Last Updated : May 7, 2025, 06:02 PM IST
  • ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ
  • 11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ, ಮೂಲಸೌಲಭ್ಯ ಅಭಿವೃದ್ಧಿ
  • ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಚಿವ ಸಂಪುಟದಲ್ಲಿ ಅನುಮೋದನೆ
ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಅಸ್ತು

ನವದೆಹಲಿ: ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ 5 ಐಐಟಿಗಳಲ್ಲಿ 11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಈ ವಿಷಯ ತಿಳಿಸಿದ್ದಾರೆ.

Add Zee News as a Preferred Source

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದಿದ್ದಾರೆ.

ಇದನ್ನೂ ಓದಿ : ಆಪರೇಷನ್ ಸಿಂಧೂರ್ ಹಿನ್ನೆಲೆ : ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ತಾಯಿ ಹೇಳಿದ್ದೇನು ?

ಈ ಐದು ಪ್ರಮುಖ ಐಐಟಿಗಳಲ್ಲಿ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಸೌಲಭ್ಯಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ, ಕೈಗಾರಿಕೆ-ಶೈಕ್ಷಣಿಕ ಸಂಪರ್ಕವನ್ನು ಬಲಪಡಿಸಲು ಐದು ಹೊಸ ಅತ್ಯಾಧುನಿಕ ಸಂಶೋಧನಾ ಪಾರ್ಕ್‌ಗಳು ಸಹ ಈ ಯೋಜನೆಯಲ್ಲಿ ಬರಲಿವೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾದ ಐದು ಹೊಸ ಐಐಟಿಗಳ ಅಭಿವೃದ್ಧಿಗೆ "ಬಿʼ ಹಂತದ ಯೋಜನೆ ಇದಾಗಿದ್ದು, ಕೇಂದ್ರ ಸಂಪುಟದಿಂದ ಅನುಮೋದನೆಗೊಂಡಿತು ಎಂದು ಹೇಳಿದ್ದಾರೆ.

130 ಅಧ್ಯಾಪಕರ ಹುದ್ದೆ ಸೃಷ್ಟಿಗೆ ಅಸ್ತು: 2025-26ರಿಂದ 2028-29ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 11,828.79 ಕೋಟಿ ವೆಚ್ಚದಲ್ಲಿ ಈ ಐಐಟಿಗಳಲ್ಲಿ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುತ್ತಿದ್ದು, 130 ಅಧ್ಯಾಪಕರ ಹುದ್ದೆಗಳನ್ನು (ಪ್ರೊಫೆಸರ್ ಮಟ್ಟದಲ್ಲಿ ಅಂದರೆ ಹಂತ 14 ಮತ್ತು ಅದಕ್ಕಿಂತ ಹೆಚ್ಚಿನ) ಸೃಷ್ಟಿಸಲು ಸಂಪುಟ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ಅನುಷ್ಠಾನ ತಂತ್ರ ಮತ್ತು ಗುರಿಗಳು: ಮುಂದಿನ ನಾಲ್ಕು ವರ್ಷಗಳಲ್ಲಿ ಈ ಐಐಟಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹಂತ ಹಂತವಾಗಿ ಹೆಚ್ಚಿಸಲಾಗುತ್ತದೆ. ಮೊದಲ ವರ್ಷದಲ್ಲಿ 1364 ವಿದ್ಯಾರ್ಥಿಗಳು, 2ನೇ ವರ್ಷದಲ್ಲಿ 1738, 3ನೇ ವರ್ಷದಲ್ಲಿ 1767 ಹಾಗೂ 4ನೇ ವರ್ಷದಲ್ಲಿ 1707 ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದ್ದು, ಒಟ್ಟಾರೆ 6500ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ.

ಈ ಐದು ಐಐಟಿಗಳು ಪ್ರಸ್ತುತ 7,111 ವಿದ್ಯಾರ್ಥಿಗಳ ಸಂಖ್ಯೆಗೆ ಬದಲಾಗಿ 13,687 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಿವೆ. ಅಂದರೆ ಈಗಲೇ 6,576 ವಿದ್ಯಾರ್ಥಿಗಳ ಹೆಚ್ಚಳ ಕಂಡಿದೆ. ಒಟ್ಟು ಸೀಟುಗಳ ಸಂಖ್ಯೆಯಲ್ಲಿನ ಈ ಹೆಚ್ಚಳದೊಂದಿಗೆ ಹೆಚ್ಚುವರಿಯಾಗಿ 6,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಾರೆ. ಈ ಮೂಲಕ ದೇಶದ ಅತ್ಯಂತ ಪ್ರತಿಷ್ಠಿತ ಮತ್ತು ಬೇಡಿಕೆಯ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಆಕಾಂಕ್ಷೆಯನ್ನು ಪೂರೈಸಲು ಸಾಧ್ಯವಾಗಲಿದೆ ಎಂದು ಸಚಿವ ಜೋಶಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ : ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ; 7 ವರ್ಷ ಜೈಲು: CBI ಕೋರ್ಟ್ ಆದೇಶ

ಕಳೆದ 10 ವರ್ಷಗಳಲ್ಲಿ 23 ಐಐಟಿಗಳಲ್ಲಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 65,000 ದಿಂದ 1.35 ಲಕ್ಷಕ್ಕೆ ಏರಿದೆ. ಅಂದರೆ ಶೇ.100ರಷ್ಟು ಹೆಚ್ಚಾಗಿದೆ. 2014 ರ ನಂತರ ಪ್ರಾರಂಭವಾದ 5 ಐಐಟಿಗಳಲ್ಲಿ 6,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಹೆಚ್ಚುವರಿ ಮೂಲಸೌಕರ್ಯಗಳನ್ನು ರಚಿಸಲಾಗುವುದು. ಇದರಿಂದ ಪದವಿ ಪೂರ್ವ (ಯುಜಿ), ಸ್ನಾತಕೋತ್ತರ (ಪಿಜಿ) ಮತ್ತು ಪಿಎಚ್‌ಡಿ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ.

ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿ: ಈ ಐದೂ ಐಐಟಿಗಳ ವಿಸ್ತರಣೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುವುದಲ್ಲದೆ, ಇದಕ್ಕೆ ಅನುಗುಣವಾಗಿ ಅಧ್ಯಾಪಕರು, ಆಡಳಿತ ಸಿಬ್ಬಂದಿ, ಸಂಶೋಧಕರು ಮತ್ತು ಸಹಾಯಕ ಸಿಬ್ಬಂದಿ ಸಂಖ್ಯೆ ಸಹ ಹೆಚ್ಚಾಗಲಿದೆ. ನೇರ ಉದ್ಯೋಗವನ್ನು ಸೃಷ್ಟಿಸಲಾಗುತ್ತದೆ. ಐಐಟಿ ಕ್ಯಾಂಪಸ್‌ಗಳ ವಿಸ್ತರಣೆ ವಸತಿ, ಸಾರಿಗೆ, ಸೇವೆ ಹಾಗೂ ಸ್ಥಳೀಯ ಆರ್ಥಿಕತೆಯನ್ನೂ ಉತ್ತೇಜಿಸುತ್ತದೆ. ಐಐಟಿಗಳಿಂದ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರ ಸಂಖ್ಯೆ ಸಹ  ಹೆಚ್ಚಾಗಿ ನಾವೀನ್ಯತೆ, ನವೋದ್ಯಮ ಪರಿಸರ ವ್ಯವಸ್ಥೆಗಳು ಮತ್ತಷ್ಟು ಉತ್ತೇಜನಗೊಳ್ಳುತ್ತವೆ. ವೈವಿಧ್ಯಮಯ ವಲಯಗಳಲ್ಲಿ ಉದ್ಯೋಗ ಸೃಷ್ಟಿಗೆ ಕೊಡುಗೆ  ನೀಡುತ್ತವೆ ಎಂದು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

2015-16ರಲ್ಲೇ ಆರಂಭವಾದ ಐಐಟಿಗಳಿವು: ಈ ಐದು ಹೊಸ ಐಐಟಿಗಳಲ್ಲಿ ಆಂಧ್ರಪ್ರದೇಶದ ತಿರುಪತಿ ಐಐಟಿ, ಕೇರಳದ ಪಾಲಕ್ಕಾಡ್), ಛತ್ತೀಸ್‌ಗಢದ ಭಿಲಾಯಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ  ಮತ್ತು ಕರ್ನಾಟಕದ ಧಾರವಾಡ ಐಐಟಿಗಳು 2015-16ರಲ್ಲಿ ಆರಂಭವಾಗಿದ್ದರೆ, ಉಳಿದ ಮೂರು 2016-17ರಲ್ಲಿ ಅವುಗಳ ತಾತ್ಕಾಲಿಕ ಕ್ಯಾಂಪಸ್‌ಗಳಿಂದ ಪ್ರಾರಂಭವಾದವುಗಳಾಗಿದ್ದು, ಈಗವು ಶಾಶ್ವತ ಕ್ಯಾಂಪಸ್‌ಗಳಿಂದ ಕಾರ್ಯ ನಿರ್ವಹಿಸುತ್ತಿವೆ ಎಂದಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News