ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ 

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

Written by - Prashobh Devanahalli | Edited by - Manjunath N | Last Updated : Jul 20, 2024, 06:55 PM IST
  • ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು
  • ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ
  • ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು
ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ  title=
file photo

ಚಿತ್ರದುರ್ಗ ಜು 20: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು. 

ಇದನ್ನೂ ಓದಿ: ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು. 

ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು. 

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು. 

ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು. 

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News