ದೊಡ್ಡಬಳ್ಳಾಪುರ: ಕೆಮಿಕಲ್ ಫ್ಯಾಕ್ಟರಿ ಒಂದರಲ್ಲಿ ಸ್ಫೋಟ ಸಂಭವಿಸಿದ್ದು ಕಾರ್ಖಾನೆ ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ರೆಸೋನೆನ್ಸ್ ಲ್ಯಾಬರೇಟರೀಸ್ ಪ್ರೈವೇಟ್ ಲಿಮಿಟೆಡ್​ ಕಂಪನಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇಂದು ಬೆಳಗ್ಗೆ 9 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಮಿಕಲ್ಸ್ ಸ್ಫೋಟಗೊಂಡು, ಕಾರ್ಖಾನೆ ಹೊತ್ತಿ ಉರಿದಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಈ ದುರ್ಘಟನೆ ನಡೆದ ವೇಳೆ  ಫ್ಯಾಕ್ಟರಿಯಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಬೆಂಕಿ ಹೊತ್ತಿಕೊಂಡ ತಕ್ಷಣ ಎಲ್ಲಾ ಕಾರ್ಮಿಕರು ಹೊರಗಡೆ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ- ನಾಡಹಬ್ಬ ಮೈಸೂರು ದಸರಾ: ಪ್ರವಾಸಿಗರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ KSRTC


ಇನ್ನು ಈ ಕಂಪನಿಯಲ್ಲಿ ಔಷಧಿ, ಮಾತ್ರೆಗಳಿಗೆ ಬೇಕಾದ ರಸಾಯನಿಕಗಳನ್ನು ಉತ್ಪತಿ ಮಾಡಲಾಗುತ್ತಿದ್ದು, ಇಂದು ಬೆಂಕಿ ಹೊತ್ತಿಕೊಂಡಿದ್ದು ಅಪಾರ ಪ್ರಮಾಣದ ವಸ್ತುಗಳು ನಾಶವಾಗಿದೆ ಎಂದು ವರದಿ ಆಗಿದೆ.


ಇದನ್ನೂ ಓದಿ- Mysuru Dasara Festival: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸಾಂಸ್ಕೃತಿಕ ನಗರಿ ಮೈಸೂರು


ಘಟನೆ ಸ್ಥಳಕ್ಕೆ ತಹಶಿಲ್ದಾರರು ಸೇರಿದಂತೆ ಹಲವು ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿ ಹತೋಟಿಗೆ ಬಂದಿದ್ದು, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.