ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟಗೊಂಡ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆಯ ವಸ್ತುಗಳಿಗೆ ಹಾನಿಯಾಗಿದ್ದು, ನಾಲ್ವರಿಗಿಂತ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ವಿಫಲ: ಬಸವರಾಜ ಬೊಮ್ಮಾಯಿ 


ಘಟನೆಯಿಂದ ಸ್ಥಳದಲ್ಲಿ ಕೆಲಕಾಳ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಫೋಟದ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಫೋಟದ ವೇಳೆ ಭಾರಿ ಶಬ್ಧವಾಗಿದೆ ಎಂದು ಹೇಳಲಾಗಿದೆ. 


ವರದಿಗಳ ಪ್ರಕಾರ, ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಗ್‌ನಲ್ಲಿ ನಿಗೂಢ ವಸ್ತು ಪತ್ತೆಯಾಗಿದೆ ಹೇಳಲಾಗುತ್ತಿದೆ. ಆದರೆ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದೆ. ತನಿಖೆಯ ಪೂರ್ಣಗೊಂಡ ಬಳಿಕವಷ್ಟೇ ಸ್ಫೋಟಕ್ಕೆ ನಿಖರ ಕಾರಣ ತಿಳಿಯಲಿದೆ. 


ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.