ಬೆಂಗಳೂರು, ಸೆಪ್ಟೆಂಬರ್ 17-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭಿಸಿರುವ ಎಕ್ಸ್ಪ್ರೆಸ್ ಕ್ಲಿನಿಕ್ ದೇಶಕ್ಕೆ ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿ ನಗರದ 20 ಕಡೆಗಳಲ್ಲಿ ಇದೆ ಮಾದರಿಯ ಕ್ಲಿನಿಕ್ ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಹೈಟೆಕ್ ಹಾಸ್ಪಿಟಲ್, ಎಕ್ಸ್ ಪ್ರೆಸ್ ಕ್ಲಿನಿಕ್ ಹಾಗೂ ಸ್ಕೈ ವಾಕ್ ಉದ್ಘಾಟಿಸಿ ಮಾತನಾಡಿದರು.


ಸಚಿವರಾದ ಡಾ. ಅಶ್ವತ್ಥ್ ನಾರಾಯಣ ಅವರು ಮಾದರಿ ಡೈಗ್ನೊಸ್ಟಿಕ್ ಕೇಂದ್ರಗಳನ್ನು ಮಾಡಿದ್ದಾರೆ . ಮಣಿಪಾಲ್ ಸಂಸ್ಥೆಯ ಸಹಯೋಗದಲ್ಲಿ ಅತ್ಯಂತ ಕಡಿಮೆ ದರದಲ್ಲಿ ಬಡವರು ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿದ್ದಾರೆ. ಎಪಿಎಲ್ ನವರಿಗೆ 30 % ದರದಲ್ಲಿ  ಬಿಪಿಎಲ್ ನವರಿಗೆ ಅತ್ಯಂತ ಕಡಿಮೆ ದರದಲ್ಲಿ ತಪಾಸಣೆ ಮಾಡಲು ದರ ನಿಗದಿ ಮಾಡಿದ್ದಾರೆ. ಬಹಳ ಅದ್ಬುತ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಡಿಜಿಟಲ್ ತಂತ್ರಜ್ಞಾನ ಹಾಗೂ ವಿಜ್ಞಾನ ಹೇಗೆ ಸದುಪಯೋಗ ಆಗುತ್ತದೆ ಎನ್ನುವುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.


ಇದನ್ನೂ ಓದಿ-Cheetah For India: ಪ್ರಧಾನಿ ಹುಟ್ಟುಹಬ್ಬದಂದು ಭಾರತಕ್ಕೆ ವಿಶ್ವದ ಅತೀ ವೇಗದ ಚಿರತೆಗಳ ಆಗಮನ:70 ವರ್ಷಗಳ ಬಳಿಕ ಈ ಸೋಜಿಗ


ನಮ್ಮ ದೇಶದ ಆರೋಗ್ಯ ಸೇವೆ ಉತ್ತಮವಾಗಿದೆ.  ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತದ ಮೂಲಕ ಎಲ್ಲರಿಗೂ ಆರೋಗ್ಯ ಸೇವೆ ದೊರೆಯುವಂತೆ ಮಾಡಿದ್ದಾರೆ  . ಆಯುಷ್ಮಾನ್ ಭಾರತ ಸರಿಯಾಗಿ ಬಳಕೆ ಮಾಡಿದ್ದರೆ ಸರ್ಕಾರಿ ಆಸ್ಪತ್ರೆಗಳು ಲಾಭದಾಯಕವಾಗುತ್ತವೆ.


ನಗರದ ನಾಲ್ಕು ಕಡೆಗಳಲ್ಲಿ ಜಯದೇವ ಆಸ್ಪತ್ರೆ ತೆರೆಯಲು ತೀರ್ಮಾನಿಸಲಾಗಿದೆ.ಈಗಾಗಲೆ ಮಲ್ಲೇಶ್ವರಂ ನಲ್ಲಿ ಆರಂಭವಾಗಿದೆ. ಬರುವ ದಿನಗಳಲ್ಲಿ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಸಮಗ್ರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಲಾಗುವುದು.ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಇದು ಮಾದರಿಯಾಗಿದೆ ಎಂದು ತಿಳಿಸಿದರು.


ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಸೇವೆಗಳನ್ನು ಪ್ರತ್ಯೇಕ ವ್ಯವಸ್ಥೆಯ ಮೂಲಕ ನಿರ್ವಹಿಸಲಾಗುವುದು.ಈ ಎಕ್ಸ್‌ಪ್ರೆಸ್ ಕ್ಲಿನಿಕ್ ನಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ನಾನಾ ಪರೀಕ್ಷೆಗಳಿಗೆ ನಿಗದಿಪಡಿಸಿರುವ ದರದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶೇಕಡ 60ರಷ್ಟು ಮತ್ತು ಎಪಿಎಲ್ ಕಾರ್ಡುದಾರರಿಗೆ ಶೇಕಡ 40ರಿಂದ  50 ರಿಯಾಯಿತಿ ಸಿಗಲಿದೆ ಎಂದರು. ಕಾರ್ಯಕ್ರಮದಲ್ಲಿ ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಡಾ. ತ್ರಿಲೋಕ ಚಂದ್ರ ಮತ್ತಿತರ ಗಣ್ಯರು ಭಾಗವಹಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.