ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸಲು 2 ವಾರಗಳ ಕಾಲ ವಿಸ್ತರಣೆ
BBMP Kannada Name Plate: ಈ ಹಿಂದೆ ಮಾನ್ಯ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2, 2024 ಮತ್ತು ಫೆಬ್ರವರಿ 12, 2024 ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳ ಫೆಬ್ರವರಿ 28, 2024 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.
ಬೆಂಗಳೂರು: ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್’ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿರುತ್ತಾರೆ.
ಇದನ್ನೂ ಓದಿ: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದಲ್ಲಿ ಮಹತ್ವದ ಬದಲಾವಣೆ: ಹೊಸ ಉಪನಾಯಕನಾಗಿ ಈ ಆಟಗಾರ ಆಯ್ಕೆ
ಅದರಂತೆ, ಈ ಹಿಂದೆ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2, 2024 ಮತ್ತು ಫೆಬ್ರವರಿ 12, 2024 ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳ ಫೆಬ್ರವರಿ 28, 2024 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಫೆಬ್ರವರಿ 29, 2024 ರಿಂದ ಅನ್ವಯವಾಗುವಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತ್ತುಗೊಳಿಸಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ (Sealdown) ಮಾಡಲು ಆರೋಗ್ಯ ಇಲಾಖಾವತಿಯಿಂದ ಅಗತ್ಯಕ್ರಮ ಕೈಗೊಳ್ಳಲು ಫೆಬ್ರವರಿ 28, 2024ರಂದು ಸುತ್ತೋಲೆ ಹೊರಡಿಸಲಾಗಿತ್ತು.
ಇದನ್ನೂ ಓದಿ: Coconut Milk: ಜಸ್ಟ್ ಒಂದು ಕಪ್ ತೆಂಗಿನಕಾಯಿ ಹಾಲು… ಅನೇಕ ರೋಗಗಳಿಗೆ ಇದೊಂದೇ ರಾಮಬಾಣ
ಮುಂದುವರೆದು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯವಕಾಶ ಬೇಕೆಂಬುದನ್ನು ಪರಿಗಣಿಸಿ, ಸನ್ಮಾನ್ಯ ಉಪ ಮುಖ್ಯಮಂತ್ರಿಗಳು, ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ನಿರ್ದೇಶನದ ಮೇರೆಗೆ ಈಗಾಗಲೇ ನೀಡಲಾಗಿದ್ದ ಫೆಬ್ರವರಿ 29, 2024ರವರೆಗಿನ ಗಡುವನ್ನು ಸಡಿಲಗೊಳಿಸಿ, ಫೆಬ್ರವರಿ 13, 2024 ರವರೆಗೆ 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಪತ್ರಿಕಾ ಸ್ಪಷ್ಠೀಕರಣದ ಮೂಲಕ ತಿಳಿಸಿರುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್