ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

Updated: Jul 4, 2020 , 06:16 PM IST
ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
Photo Courtsey : http://ksskdc.kar.nic.in/(file photo)

ಬೆಂಗಳೂರು : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಯೋಜನೆಗಳಿಗೆ ಆನ್ಲೈನನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನುವೆಲ್ ಸ್ಕ್ಯಾವೆಂಜರಗಳು ಆನಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವೆಬ್‍ಸೈಟ್ ವಿಳಾಸ: www.ksskdc.kar.nic.in.

ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ದೂರವಾಣಿ ಸಂಖ್ಯೆ 0836 2447151ನ್ನು ಸಂಪರ್ಕಿಸ ಬಹುದಾಗಿದೆ ಎಂದು ಧಾರವಾಡ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.