ಮೊರಾರ್ಜಿ ಹಾಗೂ ಇತರ ವಸತಿ ಶಾಲೆಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ (Morarji Desai Residential School), ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ (Morarji Desai Residential School), ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: "ಅಪ್ಪು ಹೋದಮೇಲೆ ಈ ಹಾಡು ಹಾಡಲು ನನಗೆ ಭಯವಾಗುತ್ತಿದೆ".. ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ನಂಬರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿಯ ಝರಾಕ್ಸ್ ಹಾಗೂ ಮಗುವಿನ ಇತ್ತೀಚಿನ ಭಾವಚಿತ್ರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 'ಎಲ್ಲಾ ಮಾದರಿಯ ಕ್ರಿಕೆಟ್ ತಂಡಕ್ಕೆ ನಾಯಕನಾಗಿರುವುದು ಗೌರವದ ಸಂಗತಿ'
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kea.kar.nic.in ಹಾಗೂ http://http://kreis.kar.nic.in ಅಥವಾ ದೂರವಾಣಿ ಸಂಖ್ಯೆ 0836-2447201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.