ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.22 ರವರೆಗೆ ಅವಧಿ ವಿಸ್ತರಿಸಲಾಗಿದೆ.

Written by - Manjunath N | Last Updated : Dec 18, 2023, 12:19 AM IST
  • ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ.1.00 ಲಕ್ಷ ಮೀರಿರಬಾರದು.
  • ಅರ್ಜಿಯನ್ನು https:/shp.karnataka.gov.in ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ title=
ಸಾಂಧರ್ಭಿಕ ಚಿತ್ರ

ಬೆಂಗಳೂರು: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.22 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಜನಾಂಗದವರಿಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗದವರಿಗೆ ರೂ.1.00 ಲಕ್ಷ ಮೀರಿರಬಾರದು.ಅರ್ಜಿಯನ್ನು  https:/shp.karnataka.gov.in ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  bcwd.hostels@karnataka.gov.in  ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ: 080-8050370006 ಗೆ ಕರೆ ಮಾಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News