ನವದೆಹಲಿ: ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟವಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೆಳಕು ಚೆಲ್ಲಿದ್ದಾರೆ.
ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರ ವೇತನ, ಪಿಂಚಣಿ, ಭತ್ಯೆಗಳಲ್ಲಿ ಹೆಚ್ಚಳ !ಈ ತಿಂಗಳಿನಿಂದಲೇ ಎಲ್ಲವೂ ಜಾರಿ
ಕ್ರಮಕ್ಕೆ ಒತ್ತಾಯಿಸಿ ಆರೋಗ್ಯ ಸಚಿವರಿಗೆ ಪತ್ರ: ದೇಶದ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಅನೇಕ ದೂರುಗಳನ್ನು ಸ್ವೀಕರಿಸಿದೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ದೇಶಾದ್ಯಂತ ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಮತ್ತಿತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಸಾರ್ವಜನಿಕರನೇಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿ ಗಮನ ಸೆಳೆದಿದ್ದಾರೆ.
ಕಲಬೆರಕೆ ಪನೀರ್ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದಾರೆ.
ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಪೋರ್ಟಲ್‌ನಲ್ಲಿ ಹಲವಾರು ದೂರುಗಳನ್ನು ದಾಖಲಿಸಿದ್ದಾರೆ. ಇದು ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆಯು ಜನರ ತೀವ್ರ ಮತ್ತು ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಹಾಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಚಾಣಕ್ಯ ನೀತಿಯ ಪ್ರಕಾರ ಹೆಂಡತಿಯ ಸೌಂದರ್ಯವೇ ಗಂಡನಿಗೆ ಆಪತ್ತು! ಹೇಗೆ ಗೊತ್ತೇ?
ಪನೀರ್ ಉತ್ಪಾದನಾ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006ರ ಪ್ರಕಾರ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ್ದಾರೆ ಪ್ರಲ್ಹಾದ ಜೋಶಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









