ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

H.D. Kumaraswamy: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

Written by - Savita M B | Last Updated : Dec 26, 2024, 05:32 PM IST
  • ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ.
  • ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು.
ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್‌.ಡಿ.ಕುಮಾರಸ್ವಾಮಿ ಕಿಡಿ title=

ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ ಸರಕಾರ. ಆದರೆ ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋಗಳು ಇರುವ ಕಟೌಟ್‌ಗಳನ್ನು ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಅವರು ಪ್ರಹಾರ ನಡೆಸಿದರು.

ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ  ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು  ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧೀಜಿ ಅವರು ಆಗಲೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ. ಈಗ ಇರುವುದು ಆಲಿಬಾಬ ಮತ್ತು 40 ಮಂದಿ ಕಳ್ಳರ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು. ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ದಯನೀಯವಾಗಿದೆ. ಗುಣಮಟ್ಟದ ಚಿಕಿತ್ಸೆ ದೊರೆಯದೆ ಬಾಣಂತಿಯರು, ಮಕ್ಕಳ ಸರಣಿ ಸಾವುಗಳು ಸಂಭವಿಸುತ್ತಿವೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.756 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಿದ್ದ ಮೇಲೆ ಆಡಳಿತ ಹೇಗೆ ಉತ್ತಮವಾಗಿರಲು ಸಾಧ್ಯ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸರಕಾರ ಪ್ರತಿದಿನವೂ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದೆ. ಜನರಿಗೆ ಇನ್ನೂ ಎರಡು ಸಾವಿರ ರೂಪಾಯಿ ಕೊಡಲಿ, ನಮ್ಮ ಅಭ್ಯಂತವಿಲ್ಲ. ಆದರೆ, ಮಿತಿ ಮೀರಿದ ತೆರಿಗೆ ಹೇರಿಕೆ ಮಾಡುತ್ತಿದ್ದಾರೆ. ಎರಡು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಎರಡು ಸಾವಿರ ರೂಪಾಯಿ ಕೊಡಲಿಕ್ಕೆ ಇವರೇ ಬೇಕಾ? ಬೇಕಾಬಿಟ್ಟಿಯಾಗಿ ಆ ಸಾಲ ತೀರಿಸುವವರು ಯಾರು? ಜನ ಸಾಮಾನ್ಯರೇ ಆ ಸಾಲ ತೀರಿಸಬೇಕಲ್ವಾ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಚಿವರು
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿವುದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಂಬಿನಿ ಮಿಡಿದಿದ್ದಾರೆ.

ಅಪಘಾತದಲ್ಲಿ ಯೋಧರು ಸಾವನ್ನಪ್ಪಿದ ವಿಚಾರ ತಿಳಿದು ನನಗೆ ಬಹಳ ದುಃಖವಾಯಿತು. ಮೃತ ಯೋಧರಲ್ಲಿ ಮೂವರು ಕನ್ನಡಿಗರು ಇದ್ದಾರೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ಆ ಅನಾಹುತ ಕರುಣಾಜನಕ ಘಟನೆ. ಕೇಂದ್ರ ಸರಕಾರ ಆ ಕುಟುಂಬಗಳ ನೆರವಿಗೆ ನಿಲ್ಲಲಿದೆ ಎಂದು ಸಚಿವರು ಹೇಳಿದರು.. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ರಾಮಚಂದ್ರ ಮುಂತಾದವರು ಜತೆಯಲ್ಲಿ ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News