ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದರಾಮಯ್ಯ
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ (Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ
CM Siddaramaiah: ಫೇಕ್ ನ್ಯೂಸ್ (Fake News) ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ (Press Day) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.
ಇದನ್ನೂ ಓದಿ- ಸಂತೆಯಲ್ಲಿ ಸುಂಕ ವಸೂಲಿ: ರೈತರಿಂದ ದಿಢೀರ್ ಪ್ರತಿಭಟನೆ
ಫೇಕ್ ನ್ಯೂಸ್ (Fake News) ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ (Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
ಇದನ್ನೂ ಓದಿ- ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?
ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.