Crime Story : ಖೋಟಾನೋಟು ಮುದ್ರಿಸಿ ಮಾರಾಟಕ್ಕೆ ಯತ್ನಿಸಿದ ಆಂಧ್ರ ಗ್ಯಾಂಗ್ ಅಂದರ್̤
ಖೋಟಾನೋಟು ಪ್ರಿಂಟ್ ಮಾಡಿ ರಾಜ್ಯ ರಾಜಧಾನಿಯಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಅಂತಾರಾಜ್ಯದ ಖತರ್ನಾಕ್ ಆರೋಪಿಗಳನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಖೋಟಾನೋಟು ಪ್ರಿಂಟ್ ಮಾಡಿ ರಾಜ್ಯ ರಾಜಧಾನಿಯಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಅಂತಾರಾಜ್ಯದ ಖತರ್ನಾಕ್ ಆರೋಪಿಗಳನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 11 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚರಣ್ ಸಿಂಗ್, ಪುಲ್ಲಲರೇವು, ರಾಜ ಹಾಗೂ ಗೋಪಿನಾಥ್ ಬಂಧಿತ ಆರೋಪಿಗಳು. ಇವರಿಂದ 500 ಮುಖಬೆಲೆಯ 11 ಲಕ್ಷ ರೂಪಾಯಿ ನಕಲಿ ಕರೆನ್ಸಿ, ಖೋಟಾನೋಟು ಪ್ರಿಂಟ್ ಮಾಡುವ ಉಪಕರಣಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳು ಇದೇ ತಿಂಗಳು ಜನವರಿ 19 ರ ಮಧ್ಯಾಹ್ನ ಉತ್ತರಹಳ್ಳಿ ಪೂರ್ಣಪ್ರಜ್ಞಾ ಲೇಔಟ್ ಬಳಿ ನಕಲಿ ನೋಟು ಚಲಾವಣೆಗೆ ಯತ್ನಿಸುತ್ತಿದ್ದರು.
ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟ ಬಳಿ ಗುಜರಾತ್ ಪ್ರವಾಸಿಗರ ಬಸ್ ಪಲ್ಟಿ- 15ಕ್ಕೂ ಹೆಚ್ಚು ಮಂದಿಗೆ ಗಾಯ
ಈ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ 500 ರೂಪಾಯಿಯ 8 ಕಂತೆಗಳಲ್ಲಿ 818 ನೋಟುಗಳಿರುವ 4 ಲಕ್ಷ ಮೌಲ್ಯದ ನೋಟು ಜಪ್ತಿ ಮಾಡಲಾಗಿತ್ತು. ವಿಚಾರಣೆ ವೇಳೆ ಅನಂತಪುರದಲ್ಲಿ ನೋಟು ತಯಾರಿಸುವ ಜಾಗದ ಬಗ್ಗೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಫೀಲ್ಡಿಗೀಳಿದ ಪೊಲೀಸರು ಆಂಧ್ರಕ್ಕೆ ತೆರಳಿ 6.25 ಲಕ್ಷ ಮೌಲ್ಯದ ನಕಲಿ ನೋಟು ಜಪ್ತಿ ಮಾಡಿಕೊಂಡು ಆರೋಪಿಗಳನ್ನು ಬಂಧಿಸಿ ಸದ್ಯ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ: ದಾಸರಹಳ್ಳಿ ವಲಯ: ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.