)
ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಯಾಗಿ ಆದಷ್ಟು ಬೇಗ ಅಧಿಕಾರ ಸ್ವೀಕರಿಸಲಿ ಎಂದು ಅವರ ಪರವಾಗಿ ಜಯ ಘೋಷಗಳನ್ನು ಕೂಗಿ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲು ತೆರಳಿದರು..
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಡಿಕೆಶಿ ಅಭಿಮಾನಿಗಳು ಗ್ರಾಮದ ಹಿರಿಯರು ಹಾಗೂ ಮಹಿಳೆಯರು ಸೇರಿದಂತೆ 150ಕ್ಕೂ ಹೆಚ್ಚು ಮಂದಿ ಎರಡು ಖಾಸಗಿ ಬಸ್ ಹಾಗೂ ಹತ್ತಕ್ಕೂ ಹೆಚ್ಚು ಕಾರುಗಳಲ್ಲಿ ಸಿಎಂ ಸಿದ್ದರಾಮಯ್ಯ ತವರೂರು ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ನಮ್ಮೂರಿನ ಮಗ ಡಿ.ಕೆ ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿ ಆಶೀರ್ವಾದ ಪಡೆಯಲು ತೆರಳಿದ್ದಾರೆ..
ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವ ಕೂಗು ಕೇಳಿ ಬರುತ್ತಿದ್ದು ಡಿಕೆಶಿ ಸ್ವಗ್ರಾಮ ದೊಡ್ಡ ಆಲಹಳ್ಳಿ ಗ್ರಾಮದಿಂದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಲಿರುವ ಬೆಂಬಲಿಗರು ಡಿಕೆ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲಿ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ..