ರೈತಪರ ಧೀಮಂತ ನಾಯಕ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಇನ್ನಿಲ್ಲ

ಬುಧವಾರ ಬೆಳಿಗ್ಗೆ 10 ಗಂಟೆಗೆ ಕ್ಯಾತನಹಳ್ಳಿಯ ಅವರ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.

Yashaswini V Yashaswini V | Updated: Feb 19, 2018 , 09:53 AM IST
ರೈತಪರ ಧೀಮಂತ ನಾಯಕ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಇನ್ನಿಲ್ಲ

ಮಂಡ್ಯ: ರೈತಪರ ಧೀಮಂತ ನಾಯಕ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಭಾನುವಾರ ರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. 

ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದ ಪುಟ್ಟಣ್ಣಯ್ಯ ಅವರನ್ನು ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲೆ ಮಾಡಲಾಯಿತು. ಆದರೆ ಆರೋಗ್ಯ ಪರಿಸ್ಥಿತಿ ಗಂಭೀರವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು.

ಕೆ.ಎಸ್. ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರವನ್ನು ಅವರ ಸ್ವ ಗ್ರಾಮವಾದ ಕ್ಯಾತನಹಳ್ಳಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸಂರಕ್ಷಿಸಿಡಲಾಗುವುದು. ಮಂಗಳವಾರ ಸಂಜೆ ವಿದೇಶದಿಂದ ಅವರ ಮಕ್ಕಳು ಮೊಮ್ಮಕ್ಕಳು ಆಗಮಿಸುವುದರಿಂದ ಬುಧವಾರ ಬೆಳಿಗ್ಗೆ 10 ಗಂಟೆಗೆ ಕ್ಯಾತನಹಳ್ಳಿಯ ಅವರ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುಟ್ಟಣ್ಣಯ್ಯ ಪುತ್ರ ತಿಳಿಸಿದ್ದಾರೆ.

ಪುಟ್ಟಣ್ಣಯ್ಯ ನಿಧನಕ್ಕೆ ಪಕ್ಷಾತೀತವಾಗಿ ಸಾಂತ್ವನ ನುಡಿದ ನಾಯಕರು

* ಮುಖ್ಯಮಂತ್ರಿ ಸಿದ್ದರಾಮಯ್ಯ

* ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

* ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

* ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ

* ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

* ಡಿ.ಕೆ. ಶಿವಕುಮಾರ್

* ಡಾ. ಜಿ. ಪರಮೇಶ್ವರ್