ಸಿಎಂ ಸಿದ್ದರಾಮಯ್ಯ ಕನಸು-ಕಾಳಜಿಯ ಗ್ಯಾರಂಟಿ ಯೋಜನೆಗಳಿಗೆ ಅಭಿನಂದನೆ ಸಲ್ಲಿಸಿದ ರೈತ ಮುಖಂಡರು
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.
ಇದನ್ನೂ ಓದಿ: ಸುತ್ತೂರು ಮಠದ ನಿಸ್ವಾರ್ಥ ಸೇವೆಗೆ ಕೇಂದ್ರ ಸಚಿವ ಅಮಿತ್ ಶಾ ಶ್ಲಾಘನೆ
ರೈತ ಮಹಿಳೆಯರ ಮತ್ತು ರೈತ ಕುಟುಂಬಗಳ ಆರ್ಥಿಕ ಶಕ್ತಿ-ಚೈತನ್ಯವನ್ನು ಗ್ಯಾರಂಟಿ ಯೋಜನೆಗಳು ಹೆಚ್ಚಿಸಿರುವುದನ್ನು ವಿವರಿಸಿದ ಬಡಗಲಾಪುರ ನಾಗೇಂದ್ರ ಅವರು, ರೈತರ ಮತ್ತು ಜನ ಸಮುದಾಯದ ಪೌಷ್ಠಿಕತೆ ಹೆಚ್ಚಿಸುವ ದಿಕ್ಕಿನಲ್ಲಿ ಸಲಹೆ ನೀಡಿದರು. ಅವರ ಸಲಹೆಯನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ತಿಳಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.
ಬಹಳ ಕಷ್ಟ ಪಟ್ಟು ಗ್ಯಾರಂಟಿ ಯೋಜನೆಗಳನ್ನು ಇಷ್ಟು ಶೀರ್ಘವಾಗಿ ಜಾರಿ ಮಾಡಿದ್ದೀರಿ. ಇದರ ಅನುಕೂಲ ರಾಜ್ಯದ ಜನರಿಗೆ ಆಗುತ್ತಿರುವ ಹೊತ್ತಲ್ಲಿ ಟೀಕೆಗಳಿಗೆ ಅಂಜುವ ಅಗತ್ಯವಿಲ್ಲ ಎನ್ನುವ ಅಭಿಪ್ರಾಯಗಳು ರೈತ ಪ್ರತಿನಿಧಿಗಳಿಂದ ವ್ಯಕ್ತವಾಯಿತು.
ಇದನ್ನೂ ಓದಿ: ಈ ವಿಷಯದಲ್ಲಿ ಧೋನಿಯನ್ನೇ ಹಿಂದಿಕ್ಕಿ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದಾರೆ ರೋಹಿತ್!
ಇವೆಲ್ಲದರ ಜತೆಗೆ ಕೃಷಿ ಇಲಾಖೆ ಅಧಿಕಾರಿಗಳು ಬೀಜ, ಗೊಬ್ಬರ ವಿತರಿಸುವುದಕ್ಕೆ ಮಾತ್ರ ಸೀಮಿತ ಆಗದೆ ಇವತ್ತಿನ ಕೃಷಿ ಬೇಡಿಕೆಗಳಿಗೆ ತಕ್ಕಂತೆ ಅಪ್ ಡೇಟ್ ಆಗಬೇಕು, ಕೆರೆಗಳ ಅಭಿವೃದ್ಧಿ, ಮಂಡ್ಯ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ ಹಣ ಸಹಾಯ ಕೊಟ್ಟಿರುವುದು ಸ್ವಾಗತಿಸಿ ಕಾರ್ಖಾನೆಯನ್ನು ಸರ್ಕಾರವೇ ನಡೆಸಲು ಮುಂದಾಗಬೇಕು, ರೈತ ಯುವಕ-ಯುವತಿಯರಿಗೆ ಭರವಸೆ ಹುಟ್ಟಿಸುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಬೇಕು, ಕೃಷಿಯಲ್ಲಿ ರಾಜ್ಯ ಮಾದರಿ ಆಗುವ ಕಾರ್ಯಕ್ರಮ ರೂಪಿಸಿ ಎನ್ನುವುದೂ ಸೇರಿದಂತೆ ನೂರಕ್ಕೂ ಅಧಿಕ ಬೇಡಿಕೆಗಳನ್ನು ರೈತ ಮುಖಂಡರು ಮುಖ್ಯಮಂತ್ರಿಗಳ ಎದುರು ಇಟ್ಟಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ